ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡದಿದ್ದರೆ ಪರಿಣಾಮ ಕಾದಿದೆ: ಸ್ವಾಮೀಜಿಗಳ ಎಚ್ಚರಿಕೆ

Last Updated 28 ಜುಲೈ 2021, 13:56 IST
ಅಕ್ಷರ ಗಾತ್ರ

ಬೆಂಗಳೂರು: ‘ಶಾಸಕ ಕೆ.ಎಸ್. ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲೇಬೇಕು. ಇಲ್ಲದಿದ್ದರೆ ಪರಿಣಾಮವನ್ನು ಬಿಜೆಪಿ ಎದುರಿಸಬೇಕಾಗುತ್ತದೆ’ ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ಸರೂರು ರೇವಣಸಿದ್ದೇಶ್ವರ ಗುರುಪೀಠದ ಶಾಂತಮಯ ಶಿವಾಚಾರ್ಯ ಸ್ವಾಮೀಜಿ, ಮಕಣಾಪುರ ಅಮೋಘೇಸಿದ್ದೇಶ್ವರ ಗುರುಪೀಠದ ಸೋಮಲಿಂಗೇಶ್ವರ ಸ್ವಾಮೀಜಿ, ಅಥಣಿಯ ಅಮರೇಶ್ವರ ಸ್ವಾಮೀಜಿ, ತಮಕೂರಿನ ಬಿಂದುಶೇಖರ ಒಡೇಯರು, ಅರಿಕೇರಿ ಮಠದ ಅಪ್ಪು ಒಡೇಯರು, ಹುಲಜಂತಿಯ ಮಾಳಿಂಗರಾಯ ಸ್ವಾಮೀಜಿ ಅವರು ನಗರದಲ್ಲಿನ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿ ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ಶಾಂತಮಯ ಶಿವಾಚಾರ್ಯ ಸ್ವಾಮೀಜಿ, ‘ಈಶ್ವರಪ್ಪ ಅವರು ಪಕ್ಷಕ್ಕಾಗಿಯೇ ಬದುಕಿದವರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಹೋಗಿ ಬಿಜೆಪಿ ಸರ್ಕಾರ ಬರಲು ಹಾಲುಮತ ಸಮುದಾಯದ ಕೊಡುಗೆ ಜಾಸ್ತಿ ಇದೆ. ಹಿರಿಯ ಜೀವಿಯಾಗಿರುವ ಈಶ್ವರಪ್ಪ ಅವರನ್ನು ಕಡೆಗಣಿಸಿದರೆ ಏನು ಮಾಡುತ್ತೇವೆ ಎಂಬುದನ್ನು ಈಗ ಹೇಳುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಮಾಡಿ ತೊರಿಸುತ್ತೇವೆ’ ಎಂದು ಎಚ್ಚರಿಸಿದರು.

‘ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನವೇ ಸಿಗಬೇಕಿತ್ತು. ಹೈಕಮಾಂಡ್ ನಿರ್ಲಕ್ಷ್ಯ ಮಾಡಿದೆ. ಈಗ ಉಪಮುಖ್ಯಮಂತ್ರಿ ಸ್ಥಾನವನ್ನು ಕೊಡಲೇಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪರಿಣಾಮವನ್ನು ಬಿಜೆಪಿ ಎದುರಿಸಲಿದೆ’ ಎಂದರು.

‘ಯಡಿಯೂರಪ್ಪ ಅವರಷ್ಟೇ ಸಮರ್ಥ ನಾಯಕ ಈಶ್ವರಪ್ಪ. ಇಬ್ಬರು ಒಟ್ಟಾಗಿಯೇ ಸೈಕಲ್ ತುಳಿದು ಬಿಜೆಪಿ ಪಕ್ಷ ಕಟ್ಟಿದ್ದಾರೆ. ಯಡಿಯೂರಪ್ಪ ನಂತರ ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ಇಟ್ಟುಕೊಂಡಿದ್ದೆವು. ಆದರೆ, ಅದು ಸಿಕ್ಕಿಲ್ಲ. ಈಗ ಉಪಮುಖ್ಯಮಂತ್ರಿ ಸ್ಥಾನವನ್ನು ಕೊಡಲೇಬೇಕು’ ಎಂದು ಸೋಮಲಿಂಗೇಶ್ವರ ಸ್ವಾಮೀಜಿ ಮತ್ತುಅಥಣಿಯ ಅಮರೇಶ್ವರ ಸ್ವಾಮೀಜಿ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT