ಶನಿವಾರ, ಮಾರ್ಚ್ 25, 2023
22 °C

ಮಸೀದಿ ರೂಪ ಪಡೆದ ಎಲ್ಲ ದೇಗುಲಗಳ ಜೀರ್ಣೋದ್ಧಾರ: ಕೆ.ಎಸ್. ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಮಂದಿರ ಕೆಡವಿ ಮಸೀದಿ ನಿರ್ಮಿಸಿರುವ ಹಿಂದೂಗಳ ಎಲ್ಲ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ದೇವಾಲಯಗಳ ಜೀರ್ಣೋದ್ಧಾರಕ್ಕೆ ಕೇಂದ್ರ ಸರ್ಕಾರ ಶ್ರಮಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಕಾಶಿ ವಿಶ್ವನಾಥ ಮಂದಿರದಲ್ಲಿ ಮಸೀದಿ ಇದೆ. ಮುಂದಿನ ದಿನಗಳಲ್ಲಿ ಅಲ್ಲಿ ಪೂರ್ಣ ಪ್ರಮಾಣದಲ್ಲಿ ದೇವಸ್ಥಾನ ನಿರ್ಮಿಸಲಾಗುವುದು. ಮಥುರಾದಲ್ಲಿಯೂ ಅದೇ ಸ್ಥಿತಿ ಇದೆ. ಅಲ್ಲೂ ಪೂರ್ಣ ಪ್ರಮಾಣದಲ್ಲಿ ದೇವಾಲಯ ನಿರ್ಮಾಣವಾಗಲಿದೆ. ಸೋಮನಾಥ ದೇವಾಲಯ ಸೇರಿ ಎಲ್ಲ ಶ್ರದ್ಧಾ ಕೇಂದ್ರಗಳನ್ನೂ ಪೂರ್ಣ ಅಭಿವೃದ್ಧಿಪಡಿಸಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅವರಿಗೆ ಅವಕಾಶ ಸಿಕ್ಕಿದೆ. ಅಯೋಧ್ಯೆಯಲ್ಲಿ ಮಂದಿರ ಕಾಮಗಾರಿ ನೋಡಿ ಕಣ್ಣುತುಂಬಿ ಬಂದಿದೆ ಎಂದರು.

2013ರಲ್ಲಿ ಕೇದಾರನಾಥದಲ್ಲಿ ಪ್ರವಾಹ ಬಂದಿತ್ತು. ಆ ವೇಳೆ, ದೇಗುಲದ ಹಿಂಭಾಗದಲ್ಲಿರುವ ಶಂಕರಾಚಾರ್ಯರ ಸಮಾಧಿಗೆ ಹಾನಿಯಾಗಿತ್ತು. ಜೀರ್ಣೋದ್ಧಾರಗೊಂಡ ಆ ಸ್ಥಳದಲ್ಲಿ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ 12 ಅಡಿ ಎತ್ತರದ ಶಂಕರಾಚಾರ್ಯರ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು