ಸೋಮವಾರ, ಏಪ್ರಿಲ್ 12, 2021
31 °C

ಎಸ್ಮಾ ಜಾರಿ ಚಿಂತನೆ: ಮುಖ್ಯಮಂತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಪರಿಪರಿಯಾಗಿ ಮನವಿ ಮಾಡಿಕೊಂಡರೂ ಸಾರಿಗೆ ನೌಕರರು ಕೆಲಸದಿಂದ ದೂರ ಉಳಿದು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದೆ. ಹೀಗಾಗಿ, ಪರಿಸ್ಥಿತಿ ನೋಡಿಕೊಂಡು ಎಸ್ಮಾ (ಅಗತ್ಯ ಸೇವಾ ನಿರ್ವಹಣಾ ಕಾಯ್ದೆ) ಜಾರಿ ಬಗ್ಗೆ ಚಿಂತಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನೌಕರರು ಮುಷ್ಕರ ನಿಲ್ಲಿಸಿ, ಮಾತುಕತೆಗೆ ಬರಬೇಕು. ಯಾರ ಜೊತೆಗೆ ಬೇಕಾದರೂ ಮಾತನಾಡಲು ಸಿದ್ಧ. ಹಟ ಸರಿಯಲ್ಲ’ ಎಂದರು.

‘ನೌಕರರ ಒಂಬತ್ತು ಬೇಡಿಕೆಗಳ ಪೈಕಿ ಎಂಟನ್ನು ಈಡೇರಿಸಿದ್ದೇವೆ. ದುರುದ್ದೇಶ ಮತ್ತು ಸ್ವಾರ್ಥದಿಂದ ಹಟ ಮಾಡುವುದು ಸಲ್ಲದು. ಜನರಿಗೆ ತೊಂದರೆ  ಆಗದಂತೆ ನೋಡಿಕೊಳ್ಳಲು ಸರ್ಕಾರದಿಂದ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಪರಿಸ್ಥಿತಿ ಅವಲೋಕಿಸುತ್ತಿದ್ದೇವೆ’ ಎಂದು ಹೇಳಿದರು.

‘ಮುಷ್ಕರದ ನೆಪದಲ್ಲಿ ಖಾಸಗಿಯವರು ಹೆಚ್ಚಿಗೆ ಹಣ ಪಡೆದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಜನರ ಸುಲಿಗೆ ಮಾಡಬೇಡಿ ಎಂದು ಅವರಲ್ಲೂ ಮನವಿ ಮಾಡುತ್ತೇನೆ’ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.