ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಜೆ ಹಳ್ಳಿ ಗಲಭೆ ಪ್ರಕರಣ: ತಲೆಮರೆಸಿಕೊಂಡ ಮಾಜಿ ಮೇಯರ್‌ ಸಂಪತ್‌ ರಾಜ್‌

Last Updated 30 ಅಕ್ಟೋಬರ್ 2020, 14:32 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಇತ್ತೀಚಿನ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಮತ್ತು ಕಾಂಗ್ರೆಸ್‌ನ ಮಾಜಿ ಕಾರ್ಪೋರೇಟರ್ ಆರ್.ಸಂಪತ್ ರಾಜ್ ಅವರು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋವಿಡ್-19 ಗೆ ಚಿಕಿತ್ಸೆಗೆಂದು ಆಸ್ಪತ್ರೆಗೆ ಸೇರಿದ್ದ ಅವರು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಸಂಪತ್‌ ರಾಜ್‌ 'ಪರಾರಿಯಾಗಿದ್ದಾರೆ' ಎಂದು ಪೊಲೀಸರ ಮಾಹಿತಿ ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಶುಕ್ರವಾರ ವರದಿ ಮಾಡಿದೆ.

ಆಗಸ್ಟ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸಂಪತ್‌ ರಾಜ್‌ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಸಹಾಯಕ ಪೊಲೀಸ್ ಆಯುಕ್ತ ವೇಣುಗೋಪಾಲ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದಾಗ ವಿಷಯ ತಿಳಿದಿದೆ.

‘ಹೌದು, ಅವರು ತಲೆಮರೆಸಿಕೊಂಡಿದ್ದಾರೆ. ನಾವು ಅವರನ್ನು ಹುಡುಕುತ್ತಿದ್ದೇವೆ’ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ವೇಣುಗೋಪಾಲ್ ತಿಳಿಸಿದ್ದಾರೆ.

ಸಂಪತ್‌ ರಾಜ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡುವ ಮೊದಲು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ವೇಣುಗೋಪಾಲ್ ಅಕ್ಟೋಬರ್ 7 ರಂದು ಆಸ್ಪತ್ರೆ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದರು. ಆದರೆ, ಆಸ್ಪತ್ರೆ ಪೊಲೀಸರಿಗೆ ಮಾಹಿತಿ ನೀಡದೆ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಅದರ ಬೆನ್ನಲ್ಲೇ ಮತ್ತೊಂದು ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT