ಗುರುವಾರ , ಅಕ್ಟೋಬರ್ 6, 2022
23 °C

ಮಾಜಿ ಶಾಸಕ ಎಚ್.ಆರ್. ಗವಿಯಪ್ಪ ಮರಳಿ ಕಾಂಗ್ರೆಸ್ ಪಕ್ಷಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾಜಿ ಶಾಸಕ ಎಚ್.ಆರ್. ಗವಿಯಪ್ಪ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಗವಿಯಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು.

ಗವಿಯಪ್ಪ ಅವರು ನೂರಾರು ಬೆಂಬಲಿಗರೊಂದಿಗೆ ಕೆಪಿಸಿಸಿ ಕಚೇರಿಗೆ ಬಂದಿದ್ದರು. ಅವರೆಲ್ಲರೂ ಕಾಂಗ್ರೆಸ್ ಪಕ್ಷ ಸೇರಿದರು.

ಗವಿಯಪ್ಪ ಅವರನ್ನು ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಶಿವಕುಮಾರ್, 'ಗವಿಯಪ್ಪ ಅವರು ಹಿಂದೆ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಈಗ ಮತ್ತೆ ಮನೆಗೆ ಮರಳಿದ್ದಾರೆ' ಎಂದರು.

ಗವಿಯಪ್ಪ ಪಕ್ಷ ಸೇರ್ಪಡೆಯನ್ನು ವಿಜಯನಗರ ಜಿಲ್ಲೆಯ ಕೆಲವು ಕಾಂಗ್ರೆಸ್ ಮುಖಂಡರು ವಿರೋಧಿಸಿರುವ ಕುರಿತು ಪ್ರಶ್ನಿಸಿದಾಗ, ಯಾರಿಗೂ ಯಾವ ಕುರ್ಚಿಯನ್ನೂ ಹಂಚಿಕೆ ಮಾಡಿಲ್ಲ. ರಾಜೀನಾಮೆ ಬೆದರಿಕೆ ಹಾಕುವವರ ಬಗ್ಗೆ ಪಕ್ಷ ತಲೆ ಕೆಡಿಸಿಕೊಳ್ಳುವುದಿಲ್ಲ.   ಪಕ್ಷಕ್ಕಾಗಿ‌ ಕೆಲಸ ಮಾಡುವವರಷ್ಟೇ ಮುಖ್ಯ ಎಂದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿಜಯನಗರ ಜಿಲ್ಲೆಗೆ ಭೇಟಿನೀಡಲಿದ್ದಾರೆ. ಅಲ್ಲಿ ಒಂದು ಬೃಹತ್ ಸಮಾವೇಶ ನಡೆಸಲಾಗುತ್ತದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು