ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಗೌರವಗಳೊಂದಿಗೆ ಧ್ರುವನಾರಾಯಣ ಅಂತ್ಯಕ್ರಿಯೆ

Last Updated 12 ಮಾರ್ಚ್ 2023, 9:15 IST
ಅಕ್ಷರ ಗಾತ್ರ

ಚಾಮರಾಜನಗರ: ಶನಿವಾರ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ತಾಲ್ಲೂಕಿನ ಹೆಗ್ಗವಾಡಿಯಲ್ಲಿ ಭಾನುವಾರ ಮಧ್ಯಾಹ್ನ ನಡೆಯಿತು.

ಹಿಂದೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.

ಇದಕ್ಕೂ ಮೊದಲು‌ ಅಗಲಿದ ನಾಯಕನಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ರಾಷ್ಟ್ರಗೀತೆ ಮೊಳಗಿಸಿ, ಒಂದು ನಿಮಿಷ ಮೌನಾಚರಣೆ ಮಾಡಿ ಗೌರವ ಸಲ್ಲಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಮನೂರು‌ ಶಿವಶಂಕರಪ್ಪ ಮತ್ತಿತರ ಮುಖಂಡರು ಪಾರ್ಥಿವ ಶರೀರಕ್ಕೆ ಪುಷ್ಪ ಗುಚ್ಛ ಇಟ್ಟು ಅಂತಿಮ ನಮನ ಸಲ್ಲಿಸಿದರು.

ಮನೆಯವರಿಂದ ಪೂಜೆ: ಅಂತ್ಯಕ್ರಿಯೆ ನಡೆಸಲು ನಿಗದಿಯಾಗಿದ್ದ ಜಾಗದಲ್ಲಿ ಕುಟುಂಬಸ್ಥರು ಮೃತದೇಹಕ್ಕೆ ಪೂಜೆ ಸಲ್ಲಿಸಿದರು. ಸಮಾಧಿ ಸ್ಥಳಕ್ಕೆ ಪೂಜೆ ಸಲ್ಲಿಸಿದ ನಂತರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT