ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರ ಸ್ನೇಹಿ ಬಜೆಟ್‌: ಸರ್ಕಾರಕ್ಕೆ ತಜ್ಞರ ಶಿಫಾರಸು

ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ನಿಯೋಗ
Last Updated 11 ಡಿಸೆಂಬರ್ 2021, 2:37 IST
ಅಕ್ಷರ ಗಾತ್ರ

ಬೆಂಗಳೂರು: ನೈಸರ್ಗಿಕ ಸಂಪನ್ಮೂಲಗಳ ವ್ಯವಸ್ಥಿತ ಸದುಪಯೋಗದ ಆಶಯ ಹೊಂದಿರುವ ಪರಿಸರ ಸ್ನೇಹಿ ಬಜೆಟ್‌ ರೂಪಿಸುವಂತೆ ವಿವಿಧ ಕ್ಷೇತ್ರಗಳ ತಜ್ಞರ ನಿಯೋಗವು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿರುವ ನಿಯೋಗವು, ರಾಜ್ಯದ ಸುಸ್ಥಿರ ಅಭಿವೃದ್ಧಿ ಸಾಧಿಸುವ ಉದ್ದೇಶದ ಯೋಜನೆಗಳನ್ನು ಮುಂಬರುವ ಬಜೆಟ್‍ನಲ್ಲಿ ಪ್ರಕಟಿಸಬೇಕು ಎಂದು ಸಲಹೆ ನೀಡಿದೆ.

ವಿವಿಧ ಇಲಾಖೆಗಳ ಮೂಲಕ ಸಾಧಿಸಬೇಕಾದ ಪ್ರಮುಖ ಯೋಜನೆಗಳನ್ನು ನಿಯೋಗವು ಪ್ರಸ್ತಾಪಿಸಿದೆ. ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ಈ ತಜ್ಞರ ನಿಯೋಗದ ನೇತೃತ್ವ ವಹಿಸಿದ್ದರು.

ಪರಿಸರ ಅರ್ಥಶಾಸ್ತ್ರಜ್ಞ ಪ್ರೊ. ಬಿ.ಎಂ. ಕುಮಾರಸ್ವಾಮಿ, ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಅಧ್ಯಕ್ಷ ಡಾ. ವಾಮನ ಆಚಾರ್ಯ, ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಡಾ. ವೈ.ಬಿ. ರಾಮಕೃಷ್ಣ, ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ. ಟಿ.ವಿ ರಾಮಚಂದ್ರ, ಸಸ್ಯ ಶಾಸ್ತ್ರಜ್ಞ ಡಾ. ಕೇಶವ ಕೊರ್ಸೆ, ವೃಕ್ಷ ಲಕ್ಷ ಆಂದೋಲನದ ಬಿ.ಎಚ್. ರಾಘವೇಂದ್ರ, ಸಾಗರದ ಸಮುದಾಯ ವಿಜ್ಞಾನ ಕೇಂದ್ರದ ಕೆ. ವೆಂಕಟೇಶ್ ನಿಯೋಗದಲ್ಲಿದ್ದರು.

ಬಜೆಟ್ ಸಿದ್ಧಪಡಿಸುವ ಮುನ್ನವೇ ಈ ವಿಷಯದ ಬಗ್ಗೆ ಚರ್ಚಿಸುವುದಾಗಿ ಮುಖ್ಯಮಂತ್ರಿ ನಿಯೋಗಕ್ಕೆ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT