ಶುಕ್ರವಾರ, ಮೇ 20, 2022
19 °C

ರಾಜ್ಯದಲ್ಲಿ ಆಹಾರ ಪದಾರ್ಥಗಳ ರಫ್ತಿಗೆ ಕ್ಲಸ್ಟರ್‌: ಶೋಭಾ ಕರಂದ್ಲಾಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜನಸಂಖ್ಯೆಗೆ ಹೋಲಿಸಿದರೆ ದೇಶದಲ್ಲಿ ಆಹಾರ ಉತ್ಪಾದನೆಯ ಪ್ರಮಾಣ ಹೆಚ್ಚಾಗಿದ್ದು, ವಿದೇಶಗಳಿಗೆ ರಫ್ತು ಮಾಡಲು ಕ್ಲಸ್ಟರ್‌ಗಳನ್ನು ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ ಆಹಾರ ಪದಾರ್ಥಗಳನ್ನು ರಫ್ತು ಮಾಡುವ ಕ್ಲಸ್ಟರ್‌ಗಳ ಸಂಖ್ಯೆ ಕಡಿಮೆ ಇದ್ದು, ಆದ್ಯತೆ ಮೇರೆಗೆ ಹೆಚ್ಚು ಕ್ಲಸ್ಟರ್‌ಗಳನ್ನು ಸ್ಥಾಪಿಸಲು ರಾಜ್ಯದ ಕೃಷಿ ಸಚಿವರ ಬಳಿ ಚರ್ಚಿಸಲಾಗಿದೆ. ಮಂಡ್ಯದಲ್ಲಿ ಕಬ್ಬು, ಚಾಮರಾಜನಗರದಲ್ಲಿ ಅರಿಶಿನ ಹಾಗೂ ಇತರ ಜಿಲ್ಲೆಗಳಲ್ಲಿ ಹಣ್ಣು ಹಾಗೂ ಸಿರಿಧಾನ್ಯಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ಜಾಗತಿಕ ಬೇಡಿಕೆ ಇರುವ ಗುಣಮಟ್ಟದ ಆಹಾರ ಪದಾರ್ಥಗಳನ್ನು ವಿದೇಶಗಳಿಗೆ ರಫ್ತು ಮಾಡಲು ಕ್ಲಸ್ಟರ್‌ಗಳು ನೆರವಾಗಲಿವೆ ಎಂದರು.

2023 ವಿಶ್ವ ಸಿರಿಧಾನ್ಯಗಳ ವರ್ಷ ಎಂದು ವಿಶ್ವಸಂಸ್ಥೆ ಘೋಷಣೆ ಮಾಡಿದ್ದು, ದೇಶದಲ್ಲಿ ಸಿರಿಧಾನ್ಯ ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಮಣಿಪುರ, ನಾಗಾಲ್ಯಾಂಡ್‌, ಸಿಕ್ಕಿಂ, ಮೇಘಾಲಯ, ತ್ರಿಪುರಗಳಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆದ ಆಹಾರ ಪದಾರ್ಥಗಳು ವಿದೇಶಗಳಿಗೆ ರಫ್ತಾಗುತ್ತಿದ್ದು, ರಾಜ್ಯದಲ್ಲೂ ಸಾವಯವ ಕೃಷಿಗೆ ಒತ್ತು ನೀಡುವ ಮೂಲಕ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲಾಗುವುದು ಎಂದರು.

ಇದಕ್ಕೂ ಮುನ್ನ ಕಡೇಕಾರಿನಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಭತ್ತದ ಗದ್ದೆಯಲ್ಲಿ ಕಳೆ ತೆಗೆದರು. ಬಳಿಕ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಜತೆ ಉಡುಪಿಯ ಪುರಭವನದಲ್ಲಿ ಭೋಜನ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು