ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖಕ್ಕೆ ಮಸಿ: ಸಾಂಸ್ಕೃತಿಕ ವಲಯ ಖಂಡನೆ

Last Updated 5 ಫೆಬ್ರುವರಿ 2021, 20:29 IST
ಅಕ್ಷರ ಗಾತ್ರ

ಬೆಂಗಳೂರು: ಸಾಹಿತಿ ಪ್ರೊ.ಕೆ.ಎಸ್. ಭಗವಾನ್ ಅವರ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದಿರುವ ಘಟನೆಯನ್ನು ಅನೇಕರು ಖಂಡಿಸಿದ್ದು, ಮೀರಾ ವಿರುದ್ಧ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಕರಣವೊಂದರ ವಿಚಾರಣೆ ಸಂಬಂಧ ನಗರದ 2ನೇ ಎಸಿಎಂಎ ನ್ಯಾಯಾಲಯಕ್ಕೆ ಗುರುವಾರ ಹಾಜರಾಗಿದ್ದ ಕೆ.ಎಸ್. ಭಗವಾನ್ ಅವರ ಮುಖಕ್ಕೆ ಮೀರಾ ಮಸಿ ಬಳಿದಿದ್ದರು. ಈ ಘಟನೆಯು ಸಾಮಾಜಿಕ ಜಾಲತಾಣದಲ್ಲಿ ಕೂಡ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದ್ದು, ಹಲವರು ಮೀರಾ ನಡೆಯನ್ನು ಖಂಡಿಸಿದ್ದಾರೆ.

‘ದುಷ್ಕೃತ್ಯ ಖಂಡನೀಯ. ಸೈದ್ಧಾಂತಿಕ ಭಿನ್ನಾಭಿಪ್ರಾಯ ಚರ್ಚೆ ಮೂಲಕ ಬಗೆಹರಿಸಿಕೊಳ್ಳಬೇಕೇ ವಿನಃ ಅಸಭ್ಯ ನಡವಳಿಕೆ ಮೂಲಕ
ವಲ್ಲ. ಪೊಲೀಸರು ವಕೀಲೆ ವಿರುದ್ಧ ಪ್ರಕರಣ ದಾಖಲಿಸಲಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಒತ್ತಾಯಿಸಿದ್ದಾರೆ.

‘ಮಾಡುವ ಮೀರಾ ಅವರ ಮಾನ್ಯತೆಯನ್ನುಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಗಳು ತಕ್ಷಣ ರದ್ದುಗೊಳಿಸಬೇಕು’ ಎಂದು ಕೆ. ಮರುಳ
ಸಿದ್ದಪ್ಪ, ಪ್ರೊ.ಜಿ.ಕೆ. ಗೋವಿಂದ ರಾವ್, ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಹಿ.ಶಿ. ರಾಮಚಂದ್ರೇಗೌಡ, ಬಂಜಗೆರೆ ಜಯಪ್ರಕಾಶ್, ಕಾಳೇಗೌಡ ನಾಗವಾರ, ದಿನೇಶ್ ಅಮಿನ್ ಮಟ್ಟು, ರುದ್ರಪ್ಪ ಹನಗವಾಡಿ, ಬಿ.ಟಿ. ಲಲಿತ ನಾಯಕ್, ವಸುಂಧರಾ ಭೂಪತಿ, ಕೆ. ಷರೀಫಾ ಹಾಗೂ ಸುಕನ್ಯಾ ಮಾರುತಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT