ಶನಿವಾರ, ಜನವರಿ 29, 2022
23 °C

ಕೋವಿಡ್‌: ನಕಲಿ ಪ್ರಮಾಣಪತ್ರ ವಿತರಣೆ –ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಣದ ಆಸೆಗೆ ಬಿದ್ದು, ಕೋವಿಡ್‌ ಪರೀಕ್ಷೆಯ ನಕಲಿ ಪ್ರಮಾಣಪತ್ರಗಳನ್ನು ನೀಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಹೊರ ರಾಜ್ಯಗಳಿಗೆ ತರಳಲು ಹಾಗೂ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರಲು ಕೋವಿಡ್‌ ಪರೀಕ್ಷೆಯಲ್ಲಿ ಸೋಂಕು ಇಲ್ಲ ಎಂಬ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಕಾವಲ್‌ಬೈರಸಂದ್ರದ ಸ್ಕೈಲೈನ್‌ ಡಯಾಗ್ನಸ್ಟಿಕ್ಸ್‌ ಹೆಸರಿನಲ್ಲಿ ಆರೋಪಿಗಳು, ‘ಕೋವಿಡ್‌ ಸೋಂಕು ಇಲ್ಲ’ ಎಂಬಂತೆ ಪರೀಕ್ಷಾ ವರದಿಯ ನಕಲಿ ಪ್ರಮಾಣಪತ್ರ ಸಿದ್ಧಪಡಿಸುತ್ತಿದ್ದರು. ಪರಿಚಿತರ ಮೂಲಕ ಅಗತ್ಯವಿರುವವರಿಗೆ ಅವುಗಳನ್ನು ವಿತರಿಸುತ್ತಿದ್ದರು. ಗೂಗಲ್‌ ಪೇ ಹಾಗೂ ನಗದು ರೂಪದಲ್ಲಿ ಹಣ ಪಡೆಯುತ್ತಿದ್ದರು’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಈ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ. ಅವರಿಂದ ಕೋವಿಡ್‌ ಪರೀಕ್ಷೆಯ 50ಕ್ಕೂ ಹೆಚ್ಚು ನಕಲಿ ಪ್ರಮಾಣಪತ್ರಗಳನ್ನು ಹಾಗೂ ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ. ಡಿ.ಜೆ.ಹಳ್ಳಿಯಲ್ಲಿ ಪ್ರಕರಣ ದಾಖಲಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.