ಶುಕ್ರವಾರ, ಮಾರ್ಚ್ 5, 2021
30 °C
ವಿಧಾನ ಪರಿಷತ್‌ ಸದಸ್ಯ ಎನ್. ರವಿಕುಮಾರ್ ಆರೋಪ

‘ನಕಲಿ ರೈತರಿಂದ ಹಿಂಸಾಚಾರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ರೈತರ ಮುಖವಾಡ ಧರಿಸಿದ ವ್ಯಕ್ತಿಗಳು ದೆಹಲಿಯಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಹಿಂಸಾಚಾರ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷ ಮತ್ತು ಸಮಾಜಘಾತುಕ ಶಕ್ತಿಗಳೇ ಇದಕ್ಕೆ ನೇರ ಕಾರಣ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ವಿಧಾನ ಪರಿಷತ್ ಸದಸ್ಯ ಎನ್‌. ರವಿಕುಮಾರ್‌ ಆರೋಪಿಸಿದ್ದಾರೆ.

‘ಕೇಂದ್ರ ಸರ್ಕಾರ 11 ಬಾರಿ ರೈತರ ಜತೆ ಸಭೆ ನಡೆಸಿದೆ. ಆದರೂ, ಸಭೆಗಳನ್ನು ವಿಫಲಗೊಳಿಸಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ದುರುದ್ದೇಶದಿಂದ ಪ್ರತಿಭಟನೆ ನಡೆಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನಡೆಸಿದವರೇ ಈ ಕೃತ್ಯದಲ್ಲೂ ಭಾಗಿಯಾಗಿದ್ದಾರೆ’ ಎಂದು ಹೇಳಿಕೆಯಲ್ಲಿ ದೂರಿದ್ದಾರೆ.

‘ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿ, ಕೆಂಪುಕೋಟೆಯ ಮೇಲೆ ಸಂಘಟನೆಯ ಧ್ವಜ ಹಾರಿಸಲಾಗಿದೆ. ಈ ಕೃತ್ಯ ನಡೆಸಿದವರು ಮತ್ತು ಕುಮ್ಮಕ್ಕು ನೀಡಿದವರನ್ನು ತಕ್ಷಣವೇ ಬಂಧಿಸಬೇಕು. ಹಿಂಸಾಚಾರದ ಹಿಂದಿರುವ ಪಟ್ಟಭದ್ರ ಹಿತಾಸಕ್ತಿಗಳು, ಉಗ್ರವಾದಿಗಳು ಮತ್ತು ಸಮಾಜಘಾತುಕ ಶಕ್ತಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ರೈತರ ಹೆಸರಿನಲ್ಲಿ ಗಲಾಟೆ ಮಾಡಿರುವುದು ದೇಶದ್ರೋಹದ ಕೆಲಸ. ಐತಿಹಾಸಿಕ ಕೆಂಪುಕೋಟೆ ಮೇಲೆ ಒಂದು ಸಂಘಟನೆಯ ಧ್ವಜ ಹಾರಿಸಿರುವುದು ಖಂಡನೀಯ. ಕಾಂಗ್ರೆಸ್‌ ಮತ್ತು ಇತರ ಪಕ್ಷಗಳ ಕುಮ್ಮಕ್ಕಿನಿಂದ ಕೃತ್ಯ ನಡೆಸಲಾಗಿದೆ’ ಎಂದು ಆರೋಪಿಸಿದ್ದಾರೆ.

ಇವುಗಳನ್ನೂ ಓದಿ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು