ಬುಧವಾರ, ಮಾರ್ಚ್ 29, 2023
26 °C

ಬಿಜೆಪಿಯಲ್ಲೇ ಕುಟುಂಬ ರಾಜಕಾರಣ: ಎಚ್.ಡಿ.ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಷ್ಟಗಿ (ಕೊಪ್ಪಳ ಜಿಲ್ಲೆ): ‘ಬಿಜೆಪಿಯಲ್ಲೇ ಕುಟುಂಬ ರಾಜಕಾರಣವಿದೆ. ಕ್ರಿಕೆಟ್‌ ಕ್ಷೇತ್ರದಲ್ಲಿ ಅನುಭವ, ಕೊಡುಗೆ ಇಲ್ಲದ ತಮ್ಮ ಪುತ್ರನಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯಲ್ಲಿ (ಬಿಸಿಸಿಐ) ದೊಡ್ಡ ಜವಾಬ್ದಾರಿ ಕೊಡಿಸಿ, ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘಿಸಿದ್ದಾರೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

‘ಯಾವುದೇ ವೃತ್ತಿ ಆಯ್ಕೆ ಮಾಡಿಕೊಳ್ಳಲು ಸಂವಿಧಾನ ಚೌಕಟ್ಟಿನಲ್ಲಿ ಅವಕಾಶವಿದೆ. ವೈದ್ಯರು, ನ್ಯಾಯಾಧೀಶರು, ಐಎಎಸ್‌ ಅಧಿಕಾರಿಗಳ ಮಕ್ಕಳು ಆಯಾ ವೃತ್ತಿ ಆಯ್ಕೆ ಮಾಡಿಕೊಂಡಂತೆ ರಾಜಕಾರಣಿಗಳ ಮಕ್ಕಳು ರಾಜಕಾರಣಿ ಆಗುವರು’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು