ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕವಿ ಲಕ್ಷ್ಮೀನಾರಾಯಣ ಭಟ್ಟ ನಿಧನಕ್ಕೆ ಗಣ್ಯರ ಸಂತಾಪ

Last Updated 6 ಮಾರ್ಚ್ 2021, 8:21 IST
ಅಕ್ಷರ ಗಾತ್ರ

ಬೆಂಗಳೂರು: ಜನಪ್ರಿಯ ಕವಿ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ(84) ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಡಾ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ʼನಾಡಿನ‌ ಖ್ಯಾತ ಕವಿ ಎನ್.ಎಸ್ ಲಕ್ಷ್ಮಿನಾರಾಯಣ ಭಟ್ ಅವರು ವಿಧಿವಶರಾದದ್ದು ದುಃಖದ ಸಂಗತಿ.ಭಾವಗೀತೆಗಳ ಲೋಕದ ಭಾವುಕ ಕವಿ ಇನ್ನಿಲ್ಲ ಎಂಬುದು ನಾಡಿನ ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದ ಭಾವಸಾರವನ್ನೆ ಕಳೆದುಕೊಂಡಂತಾಗಿದೆ.ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ಕರುಣಿಸಲಿʼ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಸಚಿವ ಅರವಿಂದ ಲಿಂಬಾವಳಿ ಅವರು, ಕನ್ನಡದ ಜನಪ್ರಿಯ ಕವಿಗಳು, ʼಆಧುನಿಕ ಕನ್ನಡ ಕಾವ್ಯ ಪರಂಪರೆಗೆ ಅತಿದೊಡ್ಡ ಕೊಡುಗೆ ನೀಡಿದ್ದ ಹಿರಿಯ ಸಾಹಿತಿ ಶ್ರೀ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ ರವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿʼ ಎಂದು ಟ್ವೀಟ್‌ ಮಾಡಿದ್ದಾರೆ.

ಉಪಮುಖ್ಯಮಂತ್ರಿ ಸಿಎನ್‌ ಅಶ್ವತ್ಥನಾರಾಯಣ ಅವರು, ʼಖ್ಯಾತ ಸಾಹಿತಿ ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟರ ಅಗಲಿಕೆಯ ಸುದ್ದಿ ನೋವು ತಂದಿದೆ.ತಮ್ಮ ಭಾವಗೀತೆಗಳ ಮೂಲಕ ನಾಡಿನ ಜನಮನ ತಲುಪಿದ 'ಎನ್‌ಎಸ್‌ಎಲ್‌ʼ ಅವರಿಗೆ ನನ್ನ ಭಾವಪೂರ್ಣ ನಮನಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆʼ ಎಂದು ಬರೆದುಕೊಂಡಿದ್ದಾರೆ.

ʼಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿದ ಹಿರಿಯ ಸಾಹಿತಿಗಳಾದ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ ಅವರು ವಿಧಿವಶರಾದ ಸುದ್ದಿ ಕೇಳಿ ಮನಸ್ಸಿಗೆ ನೋವಾಯಿತು.ಅವರ ಆತ್ಮಕ್ಕೆ ಶಾಂತಿ ಪ್ರಾಪ್ತಿಯಾಗಲಿ, ಕುಟುಂಬ ವರ್ಗಕ್ಕೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆʼ ಎಂದುಮಾಜಿ ಸಚಿವ ಜಿಟಿ ದೇವೇಗೌಡ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT