ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ

Last Updated 2 ಮೇ 2022, 8:53 IST
ಅಕ್ಷರ ಗಾತ್ರ

ಶಿಕಾರಿಪುರ:ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಂತೋಷ್ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ನನ್ನ ಪ್ರಕಾರ ನಾಯಕತ್ವ ಬದಲಾವಣೆ ಇಲ್ಲ. ಸಂತೋಷ್ ಜೀ ಅವರ ಹೇಳಿಕೆ ಬಗ್ಗೆ ಚರ್ಚಿಸುವುದಿಲ್ಲ. ಹೇಳಿಕೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ.

ರಾಜ್ಯಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತಾ ಶಾ ಅವರನ್ನು ಸಂಜೆ ಭೇಟಿ ಮಾಡುತ್ತೇನೆ. ಚುನಾವಣೆ ವರ್ಷವಾಗುವುದರಿಂದ ರಾಜಕೀಯ ಪರಿಸ್ಥಿತಿ ಅವಲೋಕಿಸಲು ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಸಂಘಟನೆ ದೃಷ್ಟಿಯಿಂದ ಪ್ರಧಾನ ಮಂತ್ರಿ ಹಾಗೂ ರಾಷ್ಟ್ರೀಯ ಅಧ್ಯಕ್ಷರು ರಾಜ್ಯದಲ್ಲಿ ಪ್ರವಾಸ ನಡೆಸುತ್ತಿದ್ದಾರೆ. ರಾಜ್ಯದ 150 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲು ಪ್ರತಿ ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚಿಸಿ ಪಕ್ಷ ಸಂಘಟಿಸಲಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT