ಬುಧವಾರ, ಅಕ್ಟೋಬರ್ 28, 2020
23 °C

ಮುಂದುವರಿದ ರೈತರ ಹೋರಾಟ: ಸರ್ಕಾರದ ವಿರುದ್ಧ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆಗಳಿಗೆ ತಿದ್ದುಪಡಿ ಸುಗ್ರೀವಾಜ್ಞೆ ವಿರೋಧಿಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳ ಅಹೋರಾತ್ರಿ ಪ್ರತಿಭಟನೆ ನಗರದಲ್ಲಿ ಎರಡನೇ ದಿನವೂ ಮುಂದುವರಿದಿದೆ.

ಸ್ವಾತಂತ್ರ್ಯ ಉದ್ಯಾನದ ದೇವರಾಜ್ ಅರಸು ವೇದಿಕೆಯಲ್ಲಿ ಪರ್ಯಾಯ ಅಧಿವೇಶನಗಳು ಆರಂಭವಾಗಿದ್ದು, ಬಡವರ ಭೂಮಿ ಮತ್ತು ವಸತಿ ಸಮಸ್ಯೆಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ಅದರ ಎದುರಿನ ರಸ್ತೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಇನ್ನೊಂದೆಡೆ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ಕರ್ನಾಟಕ ಹಸಿರು ಸೇನೆ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಧರಣಿ ಮುಂದುವರಿಸಿದೆ. ಮೂರು ಕಾಯ್ದೆಗಳ ತಿದ್ದುಪಡಿಯನ್ನು ಕೂಡಲೇ ವಾಪಸ್ ಪಡೆಯಬೇಕು. ಅಲ್ಲಿಯ ತನಕ ಹೋರಾಟ ಕೈಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸುಗ್ರೀವಾಜ್ಞೆ: ದುಡಿಯುವರ ಕಿಡಿ, ಅಹೋರಾತ್ರಿ ಪ್ರತಿಭಟನೆ ಶುರು

ಈ ಮಧ್ಯೆ, ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಭೇಟಿ‌‌ ನೀಡಿ‌ ಮನವಿ ಆಲಿಸಿದ್ದಾ. ರೈತರ ಬೇಡಿಕೆ ಕುರಿತು ಮುಖ್ಯಮಂತ್ರಿ ಅವರ ಜೊತೆ ಮಾತನಾಡುವ ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು