ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳ ನೂರಾರು ಸದಸ್ಯರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯ್ದೆಗಳು ರೈತ ಮತ್ತು ಕಾರ್ಮಿಕ ವಿರೋಧಿಯಾಗಿವೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ರಾಜಧಾನಿಗೆ ಬಂದಿದ್ದಾರೆ. ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪರೇಡ್ ನಡೆಸಲು ಸಿದ್ಧತೆ ನಡೆದಿದೆ. ನಗರದೊಳಗೆ ಕೇವಲ 125 ಟ್ರ್ಯಾಕ್ಟರ್ ಪ್ರವೇಶಿಸಲು ಅನುಮತಿ ನೀಡಿದ್ದು, ಸುಮಾರು 1 ಗಂಟೆಯ ವೇಳೆ ಟ್ರ್ಯಾಕ್ಟರ್ ಪರೇಡ್ ನಡೆಯಲಿದೆ.

'ಹಸಿರು ಶಾಲು ಹಾಕಿಕೊಂಡು ರೈತರ ಪ್ರತಿನಿಧಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈಗ ರೈತ ವಿರೋಧಿ ಕಾನೂನುಗಳನ್ನು ಬೆಂಬಲಿಸುತ್ತಿದ್ದಾರೆ' ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಹಾಗೂ ಮಹಿಳಾ ಸಂಘಟನೆಗಳ ಸದಸ್ಯರೂ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.