ಬೆಂಗಳೂರು: ‘ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಆರು ತಿಂಗಳಾಗಿದೆ. ಅವರ ಬೇಡಿಕೆಗಳನ್ನು ಪ್ರಜಾತಾಂತ್ರಿವಾಗಿ ಬಗೆಹರಿಸಿ, ಜನವಿರೋಧಿ ಕಾಯ್ದೆಗಳನ್ನು ವಾಪಸು ಪಡೆಯಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ದೇಶದ ಆರ್ಥಿಕ ಭದ್ರತೆಯನ್ನು ನಾಶ ಮಾಡುವ ಮತ್ತು ರೈತರ, ಕಾರ್ಮಿಕರ ಪಾಲಿಗೆ ಮಾರಣಾಂತಿಕವಾಗುವ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಮೋದಿ ಸರ್ಕಾರ ಜಾರಿಗೆ ತಂದಿದೆ. ಪ್ರತಿಭಟನೆಯ ಸ್ಥಳದಲ್ಲಿ ಸುಮಾರು 340ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಅವರನ್ನು ಮೋದಿ ಸರ್ಕಾರವೇ ಕೊಂದಿದೆ ಎಂದು ಜನರು ಭಾವಿಸುತ್ತಿದ್ದಾರೆ. ಇತಿಹಾಸದಲ್ಲಿ ಯಾವುದೇ ದೇಶದ ನಾಗರಿಕ ಸರ್ಕಾರವು ಜನರ ಬೃಹತ್ ಚಳುವಳಿಯನ್ನು ಈ ಮಟ್ಟದಲ್ಲಿ ನಿರ್ಲಕ್ಷಿಸಿದ ಇತಿಹಾಸ ಇಲ್ಲ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಮೋದಿ ಸರ್ಕಾರ ಜನರ, ರೈತರ ಹೋರಾಟವನ್ನು ತೀವ್ರವಾಗಿ ನಿರ್ಲಕ್ಷಿಸಿತು. ದಮನಿಸಲು ಪ್ರಯತ್ನಿಸಿತು. ಅತ್ಯಂತ ಅಮಾನುಷವಾಗಿ ವರ್ತಿಸಿತು. ದೇಶದ ಶೇ 80ರಷ್ಟು ಜನರು ರೈತಾಪಿ ಕುಟುಂಬಗಳೊಂದಿಗೆ ನೇರವಾಗಿ ಸಂಬಂಧವಿರುವವರು. ಅಷ್ಟು ಬೃಹತ್ ಜನ ಸಮುದಾಯದ ಹಕ್ಕೊತ್ತಾಯಗಳಿಗೆ ಮೋದಿಯವರ ಸರ್ಕಾರ ಕುರುಡಾಗಿ, ಕಿವುಡಾಗಿ ನಡೆದುಕೊಳ್ಳುತ್ತಿದೆ’ ಎಂದು ದೂರಿದ್ದಾರೆ.

‘ಕಳೆದ ವರ್ಷ ಬೇಳೆ ಕಾಳುಗಳು, ಎಣ್ಣೆ ಬೀಜಗಳ ಉತ್ಪಾದನೆ ಶೇ 16 ರಷ್ಟು ಹೆಚ್ಚಾಗಿತ್ತು. ಕೃಷಿಯು ರಾಜ್ಯದಲ್ಲಿ ಶೇ 6.4 ರಷ್ಟು, ದೇಶದಲ್ಲಿ 3.5 ರಷ್ಟು ಪ್ರಗತಿಯಾಗಿದೆಯೆಂದು ಸರ್ಕಾರಗಳೇ ತಮ್ಮ ವರದಿಗಳಲ್ಲಿ ಹೇಳಿಕೊಂಡಿವೆ. ಹಾಗಿದ್ದರೆ ತೊಗರಿ, ಹೆಸರು, ಅವರೆ, ಉದ್ದು, ಅಲಸಂದೆ, ಸೋಯಾ, ಕಡಲೆ ಮುಂತಾದ ಕಾಳುಗಳನ್ನು ಹಾಗೂ ಸೂರ್ಯಕಾಂತಿ, ಕಡಲೆ ಕಾಯಿ ಮುಂತಾದ ಎಣ್ಣೆ ಬೀಜಗಳನ್ನು ಉತ್ಪಾದನೆ ಮಾಡುತ್ತಿರುವ ರೈತರಿಗೆ ಒಳ್ಳೆಯ ಬೆಲೆ ಸಿಗಲಿಲ್ಲ. ಆದರೆ, ಮಾರುಕಟ್ಟೆಯಲ್ಲಿ ಬೇಳೆ ಕಾಳುಗಳ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 75 ರಷ್ಟು ಹೆಚ್ಚಾಗಿದೆ. ಅಡುಗೆ ಎಣ್ಣೆಯ ಬೆಲೆ ಶೇ 120 ಪಟ್ಟು ಹೆಚ್ಚಾಗಿದೆ. ಇವುಗಳಿಗೆ ಸಂಬಂಧಿಸಿದಂತೆ ಹಣದುಬ್ಬರದ ಪ್ರಮಾಣ ಶೇ 16ಕ್ಕೂ ಹೆಚ್ಚಾಗಿದೆ. ಕೊರೊನ ಕಾರಣದಿಂದ ಜನರ ಕೈಯಲ್ಲಿ ಹಣವಿಲ್ಲದೆ ಅವರ ಕೊಂಡುಕೊಳ್ಳುವ ಶಕ್ತಿಯೂ ಕಡಿಮೆಯಾಗಿದೆ. ಆದರೆ, ಬೆಲೆಗಳು ಮಾತ್ರ ತೀವ್ರವಾಗಿ ಏರಿಕೆಯಗುತ್ತಿವೆ. ಹಾಗಿದ್ದರೆ ರೈತರು ಬೆಳೆದದ್ದೆಲ್ಲ ಎಲ್ಲಿ ಹೋಯಿತು’ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ– ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆಗೆ 6 ತಿಂಗಳು: ಕರಾಳ ದಿನ ಆಚರಣೆ

‘ಬೇಳೆ ಕಾಳುಗಳು ಮತ್ತು ಎಣ್ಣೆ ಕಾಳುಗಳ ಪ್ರಮುಖ ವ್ಯಾಪಾರಿ ಅದಾನಿ ಮತ್ತು ಅದಾನಿ ವಿಲ್ಮಾರ್ ಕಂಪನಿ. ರಫ್ತು ಮತ್ತು ಆಮದನ್ನು ನಿಯಂತ್ರಿಸುತ್ತಿರುವುದು ಇದೇ ಕಂಪನಿ. ಕೇಂದ್ರ ಸರ್ಕಾರ ಬಂದರುಗಳನ್ನು, ವಿಮಾನ ನಿಲ್ದಾಣಗಳನ್ನು ಅದಾನಿಗೆ ಬಿಟ್ಟುಕೊಟ್ಟಿದೆ. ದೇಶದಲ್ಲಿ ಸುಮಾರು 5 ಕೋಟಿ ಟನ್ ತೊಗರಿ ಬೇಳೆ ಬಳಕೆ ಇದೆ. ಒಂದು ಕೆ.ಜಿ. ತೊಗರಿ ಬೇಳೆಯ ಬೆಲೆ ₹ 30 ಹೆಚ್ಚಾದರೆ ಈ ಕಂಪನಿಗೆ ಒಂದು ವರ್ಷಕ್ಕೆ ಒಂದೂವರೆ ಲಕ್ಷ ಕೋಟಿ ಹಣ ಸಂಗ್ರಹವಾಗುತ್ತದೆ’ ಎಂದಿದ್ದಾರೆ.

‘ಮೋದಿಯವರ ಸರ್ಕಾರಕ್ಕೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ, ತಾನು ಸರ್ವಾಧಿಕಾರಿಯಲ್ಲ ಎಂಬ ವಿವೇಕವಂತಿಕೆ ಇದ್ದರೆ ಕೂಡಲೇ ರೈತರೊಂದಿಗೆ ಶಾಂತಿಯುತವಾಗಿ ಚರ್ಚಿಸಿ ಹೋರಾಟವನ್ನು ಹಿಂಪಡೆಯುವಂತೆ ಮಾಡಬೇಕು. ರೈತರ, ಕಾರ್ಮಿಕ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಕೂಡಲೇ ಜನ ವಿರೋಧಿಯಾದ ಅದಾನಿ, ಅಂಬಾನಿ ಮತ್ತು ಕಾರ್ಪೊರೇಟ್ ಪರವಾದ ಕಾನೂನುಗಳನ್ನು ಹಿಂಪಡೆಯಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಪ್ರತಿಭಟನೆಯ ಸಂದರ್ಭದಲ್ಲಿ ಮರಣ ಹೊಂದಿದ ಎಲ್ಲ ರೈತರನ್ನು ಹುತಾತ್ಮರೆಂದು ಘೋಷಿಸಿ ಅವರ ಕುಟುಂಬಗಳಿಗೆ ಪರಿಹಾರ ನೀಡಬೇಕು. ರೈತರು ಬೆಳೆಯುವ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನೀಡಬೇಕು ಮತ್ತು ಗ್ರಾಹಕರಿಗೂ ನ್ಯಾಯಯುತವಾದ ಬೆಲೆಗಳಲ್ಲಿ ಅಕ್ಕಿ, ಬೇಳೆ, ಅಡುಗೆ ಎಣ್ಣೆ ಸಿಗುವಂತೆ ಮಾಡಬೇಕು. ಅದಾನಿ ಮುಂತಾದವರು ಅಕ್ರಮವಾಗಿ ಸಂಗ್ರಹಿಸಿರುವ ಎಲ್ಲ ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರುಕಟ್ಟೆಗೆ ತಂದು ಹಣದುಬ್ಬರ ನಿಯಂತ್ರಿಸಬೇಕು. ನ್ಯಾಯಯುತ ಬೆಲೆಗಳಿಗೆ ಮಾರುವಂತೆ ಮಾಡಬೇಕು. ಕೂಡಲೇ ವಿದೇಶದಿಂದ ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಬೇಕು’ ಎಂದು ಅವರು ಹೇಳಿದ್ದಾರೆ.

‘ರೈತರು ಬೆಳೆದ ಬೆಳೆಗಳಿಗೆ ಬೆಲೆ ಖಾತ್ರಿ ಕಾಯ್ದೆಯನ್ನು, ಗ್ರಾಹಕರಿಗೆ ನ್ಯಾಯಯುತ ಬೆಲೆಗಳ ಖಾತ್ರಿಯ ಕಾಯ್ದೆಯನ್ನು ಜಾರಿಗೊಳಿಸಬೇಕು. ಇದನ್ನು ನಿಭಾಯಿಸಲು ಸರ್ವಪಕ್ಷಗಳ, ತಜ್ಞರ, ರೈತ ಮುಖಂಡರ, ಗ್ರಾಹಕ ಪ್ರತಿನಿಧಿಗಳ ಶಾಶ್ವತ ಸಮಿತಿ ರಚಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಲಾಕ್ ಡೌನ್ ಅವಧಿಯಲ್ಲಿ ಮತ್ತು ಆ ನಂತರ ಜಾರಿಗೆ ತಂದಿರುವ, ತಿದ್ದುಪಡಿ ಮಾಡಿರುವ ಎಲ್ಲ ಕಾಯ್ದೆಗಳನ್ನು ರದ್ದುಪಡಿಸಬೇಕು’ ಎಂದೂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.