ಗುರುವಾರ , ಡಿಸೆಂಬರ್ 1, 2022
25 °C

ರೈತರ ಚಳುವಳಿಯು ಭಾರತ್‌ ಜೋಡೊ ಯಾತ್ರೆಗೆ ದೊಡ್ಡ ಸ್ಫೂರ್ತಿ: ರಾಹುಲ್‌ ಗಾಂಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತ್‌ ಜೋಡೊ ಯಾತ್ರೆ ಮಾಡಲು ನಿರ್ಧರಿಸಿದಾಗ, ರೈತರ ಚಳುವಳಿ ನಮಗೆ ದೊಡ್ಡ ಸ್ಫೂರ್ತಿಯಾಗಿತ್ತು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಆಯುಧಪೂಜೆ ಮತ್ತು ವಿಜಯದಶಮಿ ಅಂಗವಾಗಿ ಭಾರತ್‌ ಜೋಡೊ ಪಾದಯಾತ್ರೆಗೆ 2 ದಿನ ಬಿಡುವು ನೀಡಲಾಗಿದ್ದು, ಅ.6ರಂದು ಮಂಡ್ಯದ ಪಾಂಡವಪುರದಿಂದ ಪಾದಯಾತ್ರೆ ಪುನರಾರಂಭಗೊಳ್ಳಲಿದೆ. ಈ ಮಧ್ಯೆ ಪಾದಯಾತ್ರೆ ಕುರಿತು ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, ಅನ್ನದಾತರಿಗೆ ನ್ಯಾಯ ಒದಗಿಸದೆ ಈ ಹೋರಾಟ ಕೊನೆಗೊಳ್ಳುವುದಿಲ್ಲ ಎಂದಿದ್ದಾರೆ.

ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಹುತಾತ್ಮರಾದ ರೈತರಿಗೆ ವರ್ಷ ಕಳೆದರೂ ನ್ಯಾಯ ಸಿಕ್ಕಿಲ್ಲ. ಕಾರಣ ಒಂದೇ - ಬಿಜೆಪಿ ಯಾವಾಗಲೂ ಅಪರಾಧಿಗಳನ್ನು ರಕ್ಷಿಸುತ್ತಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಕಳೆದ ವರ್ಷದ ಅ. 3ರಂದು ಉತ್ತರ ಪ್ರದೇಶದ ಲಖೀಂಪುರ ಖೀರಿ ಜಿಲ್ಲೆಯ ಟಿಕುನಿಯಾ ಗ್ರಾಮದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಉತ್ತರ ಪ್ರದೇಶದ ಆಗಿನ ಉಪ ಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ ಭೇಟಿಯನ್ನು ವಿರೋಧಿಸಿ ಧರಣಿ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಮಗ ಆಶಿಶ್‌ ಮಿಶ್ರಾ ಕಾರು ಚಲಾಯಿಸಿದ್ದರು. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದರು. ಬಳಿಕ ನಡೆದ ಹಿಂಸಾಚಾರದಲ್ಲಿ ಪತ್ರಕರ್ತ ಸೇರಿ ನಾಲ್ವರು ಅಸುನೀಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು