ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ವಿರುದ್ಧ ಅನ್ನದಾತರ ಆಕ್ರೋಶ

ರಾಜ್ಯದಾದ್ಯಂತ ಪ್ರತಿಭಟನೆ * ಹೋರಾಟಗಾರರಿಗೆ ‘ಪೊಲೀಸ್’ ನಿರ್ಬಂಧ
Last Updated 26 ಜನವರಿ 2021, 17:55 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ವಾಪಸ್‌ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ರೈತರು ಮಂಗಳವಾರ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದರು. ದಲಿತ, ಕಾರ್ಮಿಕ, ಸಿಖ್, ವಿದ್ಯಾರ್ಥಿ ಹಾಗೂ ಮಹಿಳಾ ಸಂಘಟನೆಗಳು ಪ್ರತಿಭಟನೆಗೆ ಕೈಜೋಡಿಸಿದವು.

ಬೆಳಿಗ್ಗೆ 8 ಗಂಟೆಯಿಂದಲೇ ರಾಜಧಾನಿಯತ್ತ ಅನ್ನದಾತರು ಹೆಜ್ಜೆ ಹಾಕಿದರು. ರೈತರು ಬಂದಿದ್ದ ಎಲ್ಲ ಟ್ರ್ಯಾಕ್ಟರ್‌ಗಳೂ ನಗರ ಪ್ರವೇಶಿಸಲು ಪೊಲೀಸರು ಅವಕಾಶ ನೀಡಲಿಲ್ಲ. ಸುಮಾರು 120 ಟ್ರ್ಯಾಕ್ಟರ್‌ಗಳನ್ನು ಮಾತ್ರ ಒಳಗೆ ಬಿಡಲಾಯಿತು. ಸುಮಾರು 1,500 ಹೆಚ್ಚು ವಿವಿಧ ವಾಹನಗಳಲ್ಲಿ ಬಂದ ಪ್ರತಿಭಟನಕಾರರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಜಮಾಯಿಸಿದರು. ಸಂಜೆ 5ರವರೆಗೂ ಪ್ರತಿಭಟನೆ ನಡೆಯಿತು. ರಾಜಧಾನಿಯಲ್ಲಿ ಶಾಂತಿಯುತವಾಗಿಯೇ ಅನ್ನದಾತರು ಹೋರಾಟ ನಡೆಸಿದರು.

ಆಯಾ ಮುಖ್ಯರಸ್ತೆಗಳಲ್ಲಿಯೇ ಪ್ರತಿಭಟನೆಗೆ ಅವಕಾಶ ನೀಡಲಾಗಿತ್ತು. ಆದ್ದರಿಂದ ಏಕಕಾಲಕ್ಕೆ ಎಲ್ಲ ರೈತರು ಒಂದೆಡೆ ಸೇರಲು ಸಾಧ್ಯವಾಗಲಿಲ್ಲ.

ಕಲಬುರ್ಗಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ 300 ಟ್ರ್ಯಾಕ್ಟರ್‌ಗಳಲ್ಲಿ ಜನತಾ ಪೆರೇಡ್‌ ನಡೆಯಿತು. ಹುಮನಾಬಾದ್‌ ರಿಂಗ್‌ರೋಡ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಮುಖ್ಯರಸ್ತೆಗಳ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಮಾರ್ಗದುದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳು, ರೈತಗೀತೆ, ಕ್ರಾಂತಿಗೀತೆಗಳು ಮೊಳಗಿದವು. ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧವೂ ರೈತರು ಘೋಷಣೆ ಕೂಗಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಿಂದ ಸರ್ದಾರ್‌ ಶಾಲಾ ಮೈದಾನದವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದ ರೈತರು, ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು. ಗಣರಾಜ್ಯೋತ್ಸವ ಪೆರೇಡ್ ನಡೆಯುತ್ತಿದ್ದ ಜಿಲ್ಲಾ ಕ್ರೀಡಾಂಗಣದತ್ತ ತೆರಳಲು ಪ್ರತಿಭಟನಕಾರರು ಮುಂದಾದರು. ಆದರೆ, ಪೊಲೀಸರು ಅವರನ್ನು ತಡೆದರು.

ಕೆ.ಆರ್‌.ಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ರೈತಸಂಘ ಮಹಿಳಾ ಘಟಕದ ಅಧ್ಯಕ್ಷೆ ನಂದಿನಿ ಜಯರಾಂ ಟ್ರ್ಯಾಕ್ಟರ್‌ ಓಡಿಸಿ ಗಮನ ಸೆಳೆದರು. ರಾಜ್ಯದ ಉಳಿದ ಜಿಲ್ಲೆಗಳಲ್ಲಿಯೂ ನೇಗಿಲಯೋಗಿಗಳ ಪ್ರತಿಭಟನೆ ನಡೆಯಿತು.

ಹುಮನಾಬಾದ್‌ ರಿಂಗ್‌ ರೋಡ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಮುಖ್ಯರಸ್ತೆಗಳ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಮಾರ್ಗದುದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳು, ರೈತಗೀತೆ, ಕ್ರಾಂತಿಗೀತೆ ಗಳು ಮೊಳಗಿದವು. ಬೆಳಗಾವಿಯ ಸುವರ್ಣ ವಿಧಾನಸೌಧದಿಂದ ಸರ್ದಾರ್‌ ಶಾಲಾ ಮೈದಾನದವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದ ರೈತರು, ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು. ಗಣರಾಜ್ಯೋತ್ಸವ ಪೆರೇಡ್ ನಡೆಯುತ್ತಿದ್ದ ಜಿಲ್ಲಾ ಕ್ರೀಡಾಂಗಣದತ್ತ ತೆರಳಲು ಪ್ರತಿಭಟನಕಾರರು ಮುಂದಾದರು. ಆದರೆ, ಪೊಲೀಸರು ಅವರನ್ನು ತಡೆದರು.

ಕೆ.ಆರ್‌.ಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ರೈತಸಂಘ ಮಹಿಳಾ ಘಟಕದ ಅಧ್ಯಕ್ಷೆ ನಂದಿನಿ ಜಯರಾಂ ಟ್ರ್ಯಾಕ್ಟರ್‌ ಓಡಿಸಿ ಗಮನ ಸೆಳೆದರು. ರಾಜ್ಯದ ಉಳಿದ ಜಿಲ್ಲೆಗಳಲ್ಲಿಯೂ ನೇಗಿಲಯೋಗಿಗಳ ಪ್ರತಿಭಟನೆ ನಡೆಯಿತು.

***

ಅಧಿಕಾರದಲ್ಲಿದ್ದವರು ಬೇಕಾಬಿಟ್ಟಿ ತೀರ್ಮಾನ ಕೈಗೊಳ್ಳಲು ದೇಶ ಯಾರೊಬ್ಬರ ಆಸ್ತಿಯಲ್ಲ. ಪೂರ್ವಜರೆಲ್ಲರೂ ದೇಶದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಇದರ ಅರಿವು ಸರ್ಕಾರಕ್ಕೆ ಇರಬೇಕು

- ಕೋಡಿಹಳ್ಳಿ ಚಂದ್ರಶೇಖರ್, ಕರ್ನಾಟಕ ರೈತ ಸಂಘದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT