ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಹೆಸರು ಹಾಳು ಮಾಡಲು ಕೇಂದ್ರ ಯತ್ನ: ಉಗ್ರಪ್ಪ ಆರೋಪ

Last Updated 27 ಜನವರಿ 2021, 18:47 IST
ಅಕ್ಷರ ಗಾತ್ರ

ಬೆಂಗಳೂರು: ‘ರೈತ ವಿರೋಧಿ ಮೂರು ಕಾಯ್ದೆಗಳನ್ನು ವಾಪಸ್‌ ಪಡೆಯುವ ಬದಲು, ಹೋರಾಟನಿರತ ರೈತರ ಹೆಸರು ಹಾಳು ಮಾಡಲುಕೇಂದ್ರ ಸರ್ಕಾರ ಯತ್ನಿಸುತ್ತಿದೆ’ ಎಂದು ಕಾಂಗ್ರೆಸ್‌ ವಕ್ತಾರ ವಿ.ಎಸ್. ಉಗ್ರಪ್ಪ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಕೆಂಪು ಕೋಟೆ ಮೇಲೆ ಬೇರೆ ಧ್ವಜ ಹಾರಿಸಿದವರು ಆರ್‌ಎಸ್‌ಎಸ್ ಮೂಲದವರು ಎಂದು ಸಾಮಾಜಿಕ ಜಾಲತಾಣದಲ್ಲಿ ಬರುತ್ತಿದೆ’ ಎಂದರು.

‘ದೇಶದಲ್ಲಿ ಈಗ ರೈತ ವಿರೋಧಿ ಸರ್ಕಾರ ಆಡಳಿತದಲ್ಲಿದೆ. ಈ ಸರ್ಕಾರದಿಂದ ಬಂಡವಾಳಶಾಹಿಗಳಿಗೆ ಮಾತ್ರ ಅನುಕೂಲ ಆಗುತ್ತಿದೆ. ಅಂಬಾನಿ, ಅದಾನಿ ಅಣತಿಯಂತೆ ಕೇಂದ್ರ ಸರ್ಕಾರ ವರ್ತಿಸುತ್ತಿದೆ’ ಎಂದು ದೂರಿದರು.

‘ಕೃಷಿ ಸಚಿವ ಬಿ.ಸಿ. ಪಾಟೀಲ ಅವರು ರೈತರನ್ನು ಭಯೋತ್ಪಾದಕರು ಎಂದು ಹೇಳಿ ಅವಮಾನಿಸಿದ್ದಾರೆ. ಪಾಟೀಲ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರನ್ನು ನಿಮ್ಹಾನ್ಸ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಬೇಕು’ ಎಂದೂ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT