ಶನಿವಾರ, ಮೇ 15, 2021
24 °C

ರೈತರ ಆತ್ಮಹತ್ಯೆ: ಕುಟುಂಬಕ್ಕೆ ನೆರವಾಗಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಖಾಸಗಿ ಲೇವಾದೇವಿಗಾರರಿಂದ ಸಾಲ ಪಡೆದು ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ನೆರವಾಗಲು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸಲ್ಲಿಸಿದ್ದ ಪ್ರತಿಕ್ರಿಯೆ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಎಂಟು ವಾರಗಳಲ್ಲಿ ಅನುಸರಣಾ ವರದಿ ಸಲ್ಲಿಸಬೇಕು’ ಎಂದು ತಿಳಿಸಿತು.

ನ್ಯಾಯಾಲಯದ ಈ ಹಿಂದಿನ ಆದೇಶವನ್ನು ಮುಖ್ಯ ಕಾರ್ಯದರ್ಶಿ ಪಾಲಿಸಿಲ್ಲ ಎಂದ ಪೀಠ, ನ್ಯಾಯಾಲಯದ ಈ ಆದೇಶವನ್ನು ನೀತಿ, ನಿರ್ಧಾರ ಕೈಗೊಳ್ಳುವ ಸೂಕ್ತ ಪ್ರಾಧಿಕಾರದ ಮುಂದೆ ಮಂಡಿಸುವಂತೆ ಸೂಚನೆ ನೀಡಿತು. ವಿಚಾರಣೆಯನ್ನು ಜೂ.11ಕ್ಕೆ ನಿಗದಿ ಮಾಡಿತು.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಅಖಂಡ ಕರ್ನಾಟಕ ರೈತ ಸಂಘ, ‘ಕಳೆದ ಎರಡು ದಶಕಗಳ ಅವಧಿಯಲ್ಲಿ ರಾಜ್ಯದಲ್ಲಿ 20 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ವಿವರಿಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು