ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೌರ್ಜನ್ಯ ಪ್ರಕರಣಗಳು ತ್ವರಿತ ನ್ಯಾಯಾಲಯಕ್ಕೆ: ಆರಗ

Last Updated 23 ಸೆಪ್ಟೆಂಬರ್ 2021, 16:37 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಅಪರಾಧ ಪ್ರಕರಣಗಳ ವಿಚಾರಣೆಯನ್ನು ತ್ವರಿತ ನ್ಯಾಯಾಲಯಗಳಿಗೆ ವರ್ಗಾಯಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಗುರುವಾರ ಕಾಂಗ್ರೆಸ್‌ನ ಶ್ರೀನಿವಾಸ್‌ ಮಾನೆ ಪ್ರಶ್ನೆಗೆ ಉತ್ತರಿಸಿದ ಅವರು, ‘ಇಂತಹ ದೌರ್ಜನ್ಯ ಪ್ರಕರಣಗಳ ವಿಚಾರಣೆಯನ್ನು ತ್ವರಿತವಾಗಿ ಮುಗಿಸಿ, ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡಬೇಕಿದೆ. ಅದಕ್ಕಾಗಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿಚಾರಣೆಯನ್ನು ತ್ವರಿತ ನ್ಯಾಯಾಲಯಗಳಿಗೆ ವರ್ಗಾಯಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ’ ಎಂದರು.

ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳ ತನಿಖೆಯನ್ನು 60 ದಿನಗಳೊಳಗೆ ಪೂರ್ಣಗೊಳಿಸಿ, ಆರೋಪಪಟ್ಟಿ ಸಲ್ಲಿಸಲಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ದಿನದ 24 ಗಂಟೆಯೂ ಕೆಲಸ ಮಾಡುವ ‘ಪಿಂಕ್‌ ಹೊಯ್ಸಳ’ ಗಸ್ತು ವಾಹನಗಳನ್ನು ನೀಡಲಾಗಿದೆ. ರಾಜ್ಯದಾದ್ಯಂತ ಸಹಾಯವಾಣಿ ತೆರೆಯಲಾಗಿದೆ. 36 ಮಹಿಳಾ ಪೊಲೀಸ್‌ ಠಾಣೆಗಳನ್ನು ಆರಂಭಿಸಲಾಗಿದೆ. ಮಹಿಳೆಯರ ಸುರಕ್ಷತೆಗಾಗಿ ಜನನಿಬಿಡ ಸ್ಥಳಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT