ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಟಿಸಿಎಲ್‌ ಪ್ರಶ್ನೆಪತ್ರಿಕೆ ಸೋರಿಕೆ: ತಂದೆ, ಮಗನ ಸೆರೆ

ಕೆಪಿಟಿಸಿಎಲ್‌ ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ
Last Updated 21 ಆಗಸ್ಟ್ 2022, 19:31 IST
ಅಕ್ಷರ ಗಾತ್ರ

ಗದಗ: ಕೆಪಿಟಿಸಿಎಲ್‌ ಕಿರಿಯ ಸಹಾಯಕ ಹುದ್ದೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಪ್ರಶ್ನೆ
ಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಗದುಗಿನ ಮುನ್ಸಿಪಲ್‌ ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ ಹಾಗೂ ಅವರ ಮಗ ಸಮೀತ್‌ ಕುಮಾರ್‌ ಎಂಬುವವರನ್ನು ಬೆಳಗಾವಿ ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ನಗರದ ಮುನ್ಸಿಪಲ್‌ ಕಾಲೇಜು ಸೇರಿದಂತೆ ಅವಳಿ ನಗರದ 21 ಕಡೆಗಳಲ್ಲಿ ಆ.7ರಂದು ಪರೀಕ್ಷೆ ನಡೆದಿತ್ತು. ಗದಗದಿಂದ ಪ್ರಶ್ನೆ
ಪತ್ರಿಕೆ ಸೋರಿಕೆಯಾಗಿರುವ ಹಿನ್ನಲೆಯಲ್ಲಿ ಪೊಲೀಸರು ವಿಚಾರಣೆ ಚುರುಕುಗೊಳಿಸುತ್ತಿದ್ದಂತೆ, ತಂದೆ– ಮಗ ಪ್ರಶ್ನೆಪತ್ರಿಕೆ ಸೋರಿಕೆಗೆ ಕೈ ಜೋಡಿಸಿದ್ದಾರೆ ಎನ್ನುವ ವಿಷಯ ಬಹಿರಂಗವಾಗಿತ್ತು.

ಪತ್ರಕರ್ತನ ಸೋಗಿನಲ್ಲಿ ಮುನ್ಸಿಪಲ್‌ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ಸಮೀತ್‌ ಕುಮಾರ್‌, ತನ್ನ ಮೊಬೈಲ್‌ನಲ್ಲಿ ಪ್ರಶ್ನೆಪತ್ರಿಕೆ ಫೋಟೊ ತೆಗೆದುಕೊಂಡಿದ್ದಾನೆ. ಮೊಬೈಲ್‌ನಲ್ಲಿ ಸೆರೆಹಿಡಿದಿದ್ದ ಫೋಟೊವನ್ನು ರಾಜ್ಯದ ಬೇರೆ ಬೇರೆ ಪರೀಕ್ಷಾ ಕೇಂದ್ರಗಳಿಗೂ
ಕಳಿಸಿರುವ ಸಾಧ್ಯತೆಗಳಿವೆ ಎಂದು ಸೈಬರ್‌ ಪೊಲೀಸರು ಶಂಕೆ ವ್ಯಕ್ತ
ಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT