ಶನಿವಾರ, ಅಕ್ಟೋಬರ್ 1, 2022
25 °C

ಫಾಝಿಲ್‌ ಹತ್ಯೆ: ಮತ್ತೊಬ್ಬ ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಸುರತ್ಕಲ್‌ನಲ್ಲಿ ಈಚೆಗೆ ನಡೆದ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್‌ ಫಾಝಿಲ್ ಹತ್ಯೆ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಇದರಿಂದ ಈ ಪ್ರಕರಣದಲ್ಲಿ ಒಟ್ಟು ಎಂಟು ಮಂದಿ ಬಂಧನವಾದಂತಾಗಿದೆ. 
ಬಂಧಿತನನ್ನು ಬಂಟ್ವಾಳದ ಹರ್ಷಿತ್ ( 28 ವರ್ಷ) ಎಂದು ಗುರುತಿಸಲಾಗಿದೆ. ಫಾಝಿಲ್‌ ಹತ್ಯೆ  ನಡೆದ ನಂತರ ಪ್ರಕರಣದ ಆರೋಪಿಗಳನ್ನು ಹರ್ಷಿತ್‌ ತನ್ನ ಕಾರಿನಲ್ಲಿ ಮನೆಗೆ ಕರೆದುಕೊಂಡು ಹೋಗಿದ್ದ. ಆರೋಪಿಗಳು ಉಳಿದುಕೊಳ್ಳಲು ಆಶ್ರಯ ನೀಡಿದ್ದ. ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಹರ್ಷಿತ್‌ನ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಜುಲೈ 27ರ ರಾತ್ರಿ ಕಾರಿನಲ್ಲಿ ಬಂದ ತಂಡ ಫಾಝಿಲ್‌ ಅವರನ್ನು ಸುರತ್ಕಲ್‌ನಲ್ಲಿ ಹತ್ಯೆ ಮಾಡಿತ್ತು. ಪ್ರಕರಣ ಸಂಬಂಧ ಪೊಲೀಸರು ಸುಹಾಸ್ ಶೆಟ್ಟಿ, ಮೋಹನ್ ಸಿಂಗ್, ಗಿರಿಧರ್, ಅಭಿಷೇಕ್, ಶ್ರೀನಿವಾಸ್ ಹಾಗೂ ದೀಕ್ಷಿತ್  ಹಾಗೂ ಅಜಿತ್ ಕ್ರಾಸ್ತಾ ಎಂಬಾತನನ್ನು ಈಗಾಗಲೇ ಬಂಧಿಸಿದ್ದಾರೆ. ಆರೋಪಿಗಳೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು