ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶ್ನೆಪತ್ರಿಕೆ ಸೋರಿಕೆ:ಆರೋಪಿ‌ ಶಿವಲಿಂಗ ಪಾಟೀಲ ಬಂಧನ

Last Updated 17 ಫೆಬ್ರುವರಿ 2021, 18:54 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಹುದ್ದೆಯ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಬೆಳಗಾವಿಯ ಶಿವಲಿಂಗ ಪಾಟೀಲ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ಬಂಧಿಸಲಾಯಿತು. ಈತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಒಂದು ವರ್ಷದ ಹಿಂದೆ ಸೆಂಟರ್ ಮುಚ್ಚಿದ್ದ’.

‘ಪ್ರಕರಣದ ಆರೋಪಿ ರಾಚಪ್ಪನನ್ನು ಈಗಾಗಲೇ ಸಿಸಿಬಿ ಬಂಧಿಸಿದೆ. ಆತನಿಂದ ಶಿವಲಿಂಗ ಪಾಟೀಲ ಪ್ರಶ್ನೆ ಪತ್ರಿಕೆ ತರಿಸಿಕೊಳ್ಳುತ್ತಿದ್ದ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳನ್ನು ಸಂಪರ್ಕಿಸಿ, ಪ್ರಶ್ನೆಪತ್ರಿಕೆ ಪೂರೈಕೆ ಮಾಡುತ್ತಿದ್ದ. ಆರೋಪಿಯನ್ನು ಬಂಧಿಸಿ, ವಿಚಾರಣೆ ಮುಂದುವರಿಸಿದ್ದೇವೆ’ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT