ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ ಮತ್ತೊಬ್ಬ ನೌಕರ, ಕಾನ್‌ಸ್ಟೆಬಲ್ ಬಂಧನ

Last Updated 27 ಜನವರಿ 2021, 17:29 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕಾನ್‌ಸ್ಟೆಬಲ್ ಮುಷ್ತಾಕ್‌ ಕ್ವಾಟಿ ನಾಯಕ್‌ ಹಾಗೂ ಕೆಪಿಎಸ್‌ಸಿ ಅಕೌಂಟ್ಸ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಕುಂಬಾರ್ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ನಗರ ಸಶಸ್ತ್ರ ಮೀಸಲು ಪಡೆಯ (ಸಿಎಆರ್) ಕೇಂದ್ರ ಕಚೇರಿಯಲ್ಲಿ ಕಾನ್‌ಸ್ಟೆಬಲ್‌ ಆಗಿರುವ ಮುಷ್ತಾಕ್‌, ಪ್ರಕರಣದಲ್ಲಿ ಈಗಾಗಲೇ ಬಂಧಿಸಲಾಗಿರುವಸ್ಟೆನೋಗ್ರಾಫರ್ ಸನಾ ಬೇಡಿಯ ಸ್ನೇಹಿತ. ಈತ ಸನಾರಿಂದ ಪ್ರಶ್ನೆಪತ್ರಿಕೆ ಪಡೆದುಕೊಂಡಿದ್ದ’.

‘ಪ್ರಕರಣದ ಮತ್ತೋರ್ವ ಬಂಧಿತ ಆರೋಪಿ ರಮೇಶ್‌ ಹಾಗೂ ಬಸವರಾಜ್ ಒಂದೇ ಕೋಣೆಯಲ್ಲಿ ವಾಸವಿದ್ದರು. ರಮೇಶ್‌ನಿಂದ ಬಸವರಾಜ್‌ ಪ್ರಶ್ನೆಪತ್ರಿಕೆ ತರಿಸಿಕೊಂಡಿದ್ದ. ಈ ಕುರಿತು ತನಿಖೆ ನಡೆಯುತ್ತಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಪ್ರಭಾವಿಗಳಿದ್ದರೂ ಕ್ರಮ: ‘ಎಫ್‌ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಲು ಸಿಸಿಬಿ ಪೊಲೀಸರಿಗೆ ಸೂಚನೆ ನೀಡಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

‘ಪ್ರಶ್ನೆಪತ್ರಿಕೆ ಪಡೆದವರೂ ಆರೋಪಿಗಳು. ಅದನ್ನು ನೀಡಿದವರು ಮತ್ತು ಪಡೆದವರು, ಇದರಲ್ಲಿ ಶಾಮೀಲಾಗಿರುವವರ ಮಾಹಿತಿ ತನಿಖೆಯಿಂದ ಬಹಿರಂಗವಾಗಬೇಕು.ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಿಸಿಬಿ ಅಧಿಕಾರಿಗಳು ಈಗಾಗಲೇ ಕೆಲ ಆರೋಪಿಗಳನ್ನು ಬಂಧಿಸಿದ್ದಾರೆ.ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದೆ. ಅವರನ್ನೂ ಶೀಘ್ರವಾಗಿ ಬಂಧಿಸಲು ಸಿಸಿಬಿಗೆ ಸೂಚಿಸಲಾಗಿದೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ’ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT