ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಡಿಎ ಪರೀಕ್ಷೆ ಸುಗಮ

ಪ್ರತಿ ಕೇಂದ್ರಕ್ಕೂ ಪೊಲೀಸ್ ಭದ್ರತೆ
Last Updated 1 ಮಾರ್ಚ್ 2021, 4:52 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಾದ್ಯಂತ ಭಾನುವಾರ ಆಯೋಜಿಸಲಾಗಿದ್ದ ಎಫ್‍ಡಿಎ ಪರೀಕ್ಷೆಯು ಸುಗಮವಾಗಿ ನಡೆಯಿತು.

ಬೆಳಗ್ಗೆ ಹಾಗೂ ಮಧ್ಯಾಹ್ನದ ಎರಡು ಅವಧಿಯಲ್ಲಿ ಜರುಗಿತು. ಮೊದಲ ಅವಧಿಯಲ್ಲಿ ಸಾಮಾನ್ಯ ಜ್ಞಾನ ಹಾಗೂ ಮಧ್ಯಾಹ್ನ ಕಡ್ಡಾಯ ಭಾಷೆ (ಕನ್ನಡ ಮತ್ತು ಇಂಗ್ಲಿಷ್‌) ಪರೀಕ್ಷೆ ನಡೆಯಿತು.

ಜಿಲ್ಲೆಯ ಒಟ್ಟು 15 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ರಾಮನಗರದಲ್ಲಿ 12 ಹಾಗೂ ಚನ್ನಪಟ್ಟಣದಲ್ಲಿ 3 ಕೇಂದ್ರಗಳ ತೆರೆಯಲಾಗಿತ್ತು. ಒಟ್ಟು 6404 ಮಂದಿ ಪರೀಕ್ಷೆ ತೆಗೆದುಕೊಂಡಿದ್ದರು. ಮೊದಲ ಅವಧಿಯಲ್ಲಿ 4405 ಮಂದಿ ಹಾಜರಾದರೇ, 1999 ಮಂದಿ ಗೈರಾದರು. ಮಧ್ಯಾಹ್ನ ಭಾಷಾ ಪರೀಕ್ಷೆಗೆ 4369 ಮಂದಿ ಹಾಜರಾಗಿದ್ದು, 2035 ಮಂದಿ ಗೈರಾದರು.

ಕಳೆದ ತಿಂಗಳು ರಾಜ್ಯದಲ್ಲಿ ಎಫ್‍ಡಿಎ ಪರೀಕ್ಷೆ ಪ್ರಶ್ನೆಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಹೀಗಾಗಿ ಈ ಬಾರಿಯ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಆಯೋಜಿಸಲಾಗಿತ್ತು. ಮೊದಲ ಬಾರಿಗೆ ಮೆಟಲ್ ಡಿಟೆಕ್ಟರ್ ಅನ್ನು ಬಳಕೆ ಮಾಡಿ ಪರೀಕ್ಷೆ ನಡೆಸಲಾಯಿತು. ಪ್ರಶ್ನೆಪತ್ರಿಕೆಗಳನ್ನು ಕಬ್ಬಿಣ ಪೆಟ್ಟಿಗೆಯಲ್ಲಿ ತರಲಾಯಿತು. ಡಿಜಿಟಲ್ ಕೈ ಗಡಿಯಾರ ಸೇರಿದಂತೆ ಇತರ ಉಪಕರಣಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಒಯ್ಯಲು ಅನುಮತಿ ನೀಡಿರಲಿಲ್ಲ. ಪ್ರತಿ ಕೇಂದ್ರಕ್ಕೂ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಕೋವಿಡ್‌ ಲಕ್ಷಣ ಇರುವವರಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT