ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸಗೊಬ್ಬರ ಧಾರಣೆ ಸ್ಥಿರತೆಗೆ ಕ್ರಮ: ಕೇಂದ್ರ ಸಚಿವ ಸದಾನಂದ ಗೌಡ

Last Updated 9 ಏಪ್ರಿಲ್ 2021, 13:20 IST
ಅಕ್ಷರ ಗಾತ್ರ

ಪುತ್ತೂರು (ದಕ್ಷಿಣ ಕನ್ನಡ): ‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರದ ದರ ವಿಪರೀತ ಏರಿರುವ ಕಾರಣ ದೇಶೀಯ ಮಾರುಕಟ್ಟೆಯಲ್ಲೂ ಧಾರಣೆ ಏರುತ್ತಿದೆ. ಧಾರಣೆ ಸ್ಥಿರತೆ ಸಾಧಿಸಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ’ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ಶುಕ್ರವಾರ ಪುತ್ತೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಈಗಾಗಲೇ ರಸಗೊಬ್ಬರವನ್ನು ರೈತರಿಗೆ ಸಹಾಯಧನದಲ್ಲಿ ನೀಡಲಾಗುತ್ತಿದೆ. ದರ ಏರಿಕೆ ತಹಬಂದಿಗೆ ಬಾರದಿದ್ದರೆ ಮತ್ತು ತೀರಾ ಅನಿವಾರ್ಯವಾದಲ್ಲಿ ಸಹಾಯಧನ ಹೆಚ್ಚಳದ ಬಗ್ಗೆ ಗಮನ ಹರಿಸಲಾಗುವುದು’ ಎಂದು ಹೇಳಿದರು.

‘ನಾವು ಈಗಲೂ ಶೇ 90ರಷ್ಟು ರಸಗೊಬ್ಬರಕ್ಕೆ ವಿದೇಶಗಳನ್ನು ಅವಲಂಬಿಸಿದ್ದೇವೆ. ಯೂರಿಯಾ ಒಂದರ ಧಾರಣೆಯಲ್ಲಿ ಶೇ 17ರಷ್ಟು ಹೆಚ್ಚಳಗೊಂಡಿದೆ. ಇತರ ಗೊಬ್ಬರಗಳ ಬೆಲೆ ಶೇ 40ರಷ್ಟು ಹೆಚ್ಚಳಗೊಂಡಿದೆ. ಕಳೆದೊಂದು ವಾರದಿಂದ ಪ್ರಮುಖ ಉತ್ಪಾದನಾ ಘಟಕಗಳ ಜತೆ ನಿರಂತರ ಮಾತುಕತೆ ನಡೆಸುತ್ತಿದ್ದೇನೆ. ಈ ಕಂಪನಿಗಳಲ್ಲಿ ಈಗಾಗಲೇ ಮುಂದಿನ ಒಂದೂವರೆ ತಿಂಗಳಿಗೆ ಆಗುವಷ್ಟು ರಸಗೊಬ್ಬರದ ದಾಸ್ತಾನಿದೆ. ಇದೆಲ್ಲವನ್ನೂ ಹಳೆಯ ದರದಲ್ಲೇ ಮಾರಾಟ ಮಾಡುವಂತೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದರು.

‘ಅಮೆರಿಕ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಹಾಲಿ ಹಂಗಾಮಿನ ಕೃಷಿ ಚಟುವಟಿಕೆ ಮುಕ್ತಾಯಗೊಳ್ಳುತ್ತಿದೆ. ಇದರ ಬೆನ್ನಲ್ಲೇ ರಸಗೊಬ್ಬರದ ಬೆಲೆಯೂ ಕಡಿಮೆಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT