ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ವಿರುದ್ಧ ‘ಕೈ‘ ಹೋರಾಟ: ಕಾಂಗ್ರೆಸ್‌ ನಾಯಕರಿಂದ ರಾಜ್ಯ ಪ್ರವಾಸ

Last Updated 9 ಜನವರಿ 2023, 9:04 IST
ಅಕ್ಷರ ಗಾತ್ರ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಇದೇ 11ರಿಂದ ರಾಜ್ಯ ಕಾಂಗ್ರೆಸ್ ನಾಯಕರು ಬಸ್ ಯಾತ್ರೆ ಆರಂಭಿಸಲಿದ್ದು, ಅದಕ್ಕೆ ಸಂಬಂಧಿಸಿ​ ಕಾಂಗ್ರೆಸ್​ ಪ್ರವಾಸ ಸಮಿತಿಯ ಸಭೆ ನಗರದ ಖಾಸಗಿ ಹೋಟೆಲ್​ನಲ್ಲಿ ಸೋಮವಾರ ನಡೆಯಿತು.

ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕವೆಂದು ವಿಭಾಗ ಮಾಡಿಕೊಂಡು ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ಯಾತ್ರೆ ಕೈಗೊಳ್ಳಲಿದ್ದಾರೆ.

ರಾಜ್ಯದ ವಿವಿಧ ಕಡೆ ನಿರಂತರ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ, ಮುಂದಿನ 100 ದಿನ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ. ಸ್ಥಳೀಯವಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಆಯಾ ಭಾಗದ ಹಿರಿಯ ಮುಖಂಡರು, ಮಾಜಿ ಸಚಿವರು, ಶಾಸಕರು ಪ್ರತ್ಯೇಕವಾಗಿ ಯಾತ್ರೆಗಳನ್ನು ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಇಂಥ ಪ್ರವಾಸದ ಮೂಲಕ ಮತದಾರರನ್ನು ಸಂಪರ್ಕಿಸಿ, ವಿಶ್ವಾಸ ಗಳಿಸಲು ಪ್ರಯತ್ನಿಸಬೇಕು ಎಂದೂ ಸೂಚನೆ ನೀಡಲಾಗಿದೆ.

ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ರಾಮಲಿಂಗಾ ರೆಡ್ಡಿ, ಧ್ರುವನಾರಾಯಣ, ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT