ಭಾನುವಾರ, ಫೆಬ್ರವರಿ 28, 2021
21 °C

ಕನ್ನಡ ವಿ.ವಿ: ಸರ್ಕಾರಕ್ಕೆ ಗಡುವು ನೀಡಿದ ಕರವೇ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅನುದಾನದ ಕೊರತೆ ಸೇರಿದಂತೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕೆಂಬ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಐದು ದಿನಗಳ ಗುಡುವು ನೀಡಿದೆ.

‘ಕನ್ನಡ ವಿ.ವಿ ಉಳಿಸಿ’ ಅಭಿಯಾನ ಆರನೇ ದಿನವೂ ಮುಂದುವರಿದಿದೆ. ‘ಕನ್ನಡಿಗರ ಅಸ್ಮಿತೆಯ ಪ್ರತೀಕವಾಗಿರುವ ವಿಶ್ವವಿದ್ಯಾಲಯ ಉಳಿಸಬೇಕು ಎಂದು ಚಳವಳಿಗೆ ಸರ್ಕಾರ ಕಿವಿಗೊಡುತ್ತಿಲ್ಲ. ಸರ್ಕಾರದ ಕಿವುಡುತನ ಸಹಿಸಲು ಆಗುವುದಿಲ್ಲ. ತನ್ನದೇ ಆದ ವಿಧಾನದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಕರವೇ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಸಿದ್ದಾರೆ.

‘ಅನುದಾನ ಬಿಡುಗಡೆ ಮಾಡುವ ಜತೆಗೆ ಅದರ ಪ್ರತ್ಯೇಕ ಅಸ್ತಿತ್ವವನ್ನು ಹಾಗೇ ಉಳಿಸಿಕೊಳ್ಳುವ ಘೋಷಣೆಯನ್ನು ಸರ್ಕಾರ ಮಾಡಬೇಕು. ಪದೇ ಪದೇ ಚಳವಳಿ ಮಾಡಬೇಡಿ, ಮಾತುಕತೆಗೆ ಬನ್ನಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳುತ್ತಾರೆ. ಇನ್ನೊಂದೆಡೆ ಅನುದಾನ ಬಿಡುಗಡೆ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವರು ನೀಡಿದ್ದ ಭರವಸೆ ಹುಸಿಯಾಗಿದೆ. ಸಾಮಾನ್ಯ ಜನರ ಕೂಗಿಗೆ ಬೆಲೆ ಕೊಡದಿದ್ದರೆ ಪರಿಣಾಮವನ್ನು ಸರ್ಕಾರವೇ ಎದುರಿಸಬೇಕಾಗುತ್ತದೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಸಾಮಾಜಿಕ‌ ಜಾಲತಾಣಗಳಲ್ಲಿ ‘ಭಿತ್ತಿಪತ್ರ ಚಳವಳಿ’ಯನ್ನು ಕರವೇ ನಡೆಸುತ್ತಿದೆ. ನಾಡಿನ ಸಾಹಿತಿಗಳು, ಮಠಾಧೀಶರು, ಚಿಂತಕರು, ಧರ್ಮಗುರುಗಳು ಈ ಚಳವಳಿಯಲ್ಲಿ ಪಾಲ್ಗೊಳ್ಳುತ್ತಿದ್ದು, ಲಕ್ಷಾಂತರ ಜನರ ಗಮನ ಸೆಳೆದಿದೆ. ಇಷ್ಟಾದರೂ ಸರ್ಕಾರ ಬೇಜವಾಬ್ದಾರಿ ಮತ್ತು ಉದಾಸೀನ‌ ಪ್ರವೃತ್ತಿಯನ್ನು ಮುಂದುವರಿಸಿದೆ. ಈ ಸಮಯದಲ್ಲಿ‌ ತೀವ್ರ ಸ್ವರೂಪದ‌ ಚಳವಳಿ ನಡೆಸದೇ ನಮಗೆ ಬೇರೆ ದಾರಿ‌ ಉಳಿದಿಲ್ಲ’ ಎಂದಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು