ಶನಿವಾರ, ಮೇ 28, 2022
21 °C

ದೇಗುಲ ಆರ್ಥಿಕ ಪರಿಸ್ಥಿತಿ ನೋಡಿ ಸ್ವತಂತ್ರಗೊಳಿಸಿ: ಸಿದ್ದರಾಮಯ್ಯ ಸಲಹೆ

ಪ್ರಜಾವಾಣಿ ವಾರ್ತೆ ‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ದೇವಾಲಯಗಳನ್ನು ಸ್ವತಂತ್ರಗೊಳಿಸಿದರೆ, ಅವುಗಳನ್ನು ನಡೆಸಿಕೊಂಡು ಹೋಗುವುದು ಕಷ್ಟವಾಗಿ ಉಪಕಾರಕ್ಕಿಂತ ತೊಂದರೆಯೇ ಹೆಚ್ಚಾಗಲಿದೆ’ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಹಿಂದೂ ದೇವಾಲಯಗಳಿಗೆ ಆರ್ಥಿಕ ನಿರ್ವಹಣೆಯ ಸ್ವಾತಂತ್ರ್ಯ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ ಹೇಳಿಕೆಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ‘ಸಾಕಷ್ಟು ದೇವಾಲಯಗಳು ಆರ್ಥಿಕವಾಗಿ ಸಂಕಷ್ಟದಲ್ಲಿವೆ. ಹಿಂದೂ ದೇವಾಲಯಗಳನ್ನು ಸರ್ಕಾರ ಅಭಿವೃದ್ಧಿಪಡಿಸುವ ಕೆಲಸ ಮಾಡಿದರೆ ನಮ್ಮ ತಕರಾರು ಇಲ್ಲ. ಸಾರಾಸಗಟಾಗಿ ಎಲ್ಲ ದೇವಾಲಯಗಳನ್ನು ಸ್ವತಂತ್ರಗೊಳಿಸುವ ಮೊದಲು ದೇವಾಲಯಗಳ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಬೇಕು’ ಎಂದು ಸಲಹೆ ನೀಡಿದರು.

‘ಜನರನ್ನು ಭಾವನಾತ್ಮಕವಾಗಿ ಹಾದಿ ತಪ್ಪಿಸಲು ಸರ್ಕಾರ ಎಷ್ಟೇ ಪ್ರಯತ್ನ ಮಾಡಿದರೂ ಜನರು ಬುದ್ದಿವಂತರಿದ್ದಾರೆ. ತಾವೇನು ತೀರ್ಮಾನ ಮಾಡಬೇಕು ಅದನ್ನೇ ಜನ ಮಾಡುತ್ತಾರೆ‘ ಎಂದೂ ಹೇಳಿದರು.

ಸರ್ಕಾರ ಅತಿದೊಡ್ಡ ತಪ್ಪು

‘ಹಿಂದೂ ದೇವಾಲಯಗಳನ್ನು ಸ್ವತಂತ್ರಗೊಳಿಸುವ ಮೂಲಕ ರಾಜ್ಯ ಸರ್ಕಾರ ಅತಿದೊಡ್ಡ ತಪ್ಪು ಮಾಡುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

‘ದೇವಾಲಯಗಳು ರಾಜ್ಯದ ಸಂಪತ್ತು. ಈ ದೇವಾಲಯಗಳಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ಆದಾಯ ಸಂಗ್ರಹ
ವಾಗುತ್ತದೆ. ಸರ್ಕಾರದ ಈ ನಿಲುವು ಅನುಷ್ಠಾನಗೊಳಿಸಲು ಅವಕಾಶ ನೀಡುವುದಿಲ್ಲ.

ಈ ಬಗ್ಗೆ ಹಿರಿಯ ನಾಯಕರ ಜತೆ ಚರ್ಚಿಸಿ, ಅಂತಿಮ ನಿರ್ಧಾರಕ್ಕೆ ಬರುತ್ತೇವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು