ಮಂಡ್ಯ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ನಿರ್ದೇಶನದ ಮೇರೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ವಿರುದ್ಧ ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್ಐಆರ್ ದಾಖಲಾಗಿದೆ.

ಮೇ 16ರಂದು ಸಚಿವ ಅಶ್ವತ್ಥ ನಾರಾಯಣ ಅವರು ನಗರದ ವಿವಿಧ ಕಾಲೇಜುಗಳಲ್ಲಿ ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಪ್ರಚಾರ ನಡೆಸಿದ್ದರು. ಅಧಿಕಾರ ದುರ್ಬಳಕೆ ಮಾಡಿಕೊಂಡು ಸಚಿವರು ಕಾಲೇಜುಗಳಲ್ಲಿ ಪ್ರಚಾರ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾಧಿಕಾರಿಗೆ ದೂರು ಸಲ್ಲಿಸಿತ್ತು.

ಸಚಿವರು ನೀತಿ ಸಂಹಿತೆ ಉಲ್ಲಂಘಿಸಿದ್ದು ಕಾನೂನು ಕ್ರಮ ಜರುಗಿಸುವಂತೆ ಕೋರಿ ಮಾದರಿ ನೀತಿ ಸಂಹಿತೆ ತಂಡದ ಮುಖ್ಯಸ್ಥರೂ ಆದ ಜಿಲ್ಲಾ ಪಂಚಾಯಿತಿ ಸಿಇಒ ಸಹಾಯಕ ಚುನಾವಣಾಧಿಕಾರಿಗೆ ವರದಿ ನೀಡಿದ್ದರು. ಜೊತೆಗೆ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಖಾಸಗಿ ದೂರು ಕೂಡ ನೀಡಿದ್ದರು. ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುವಂತೆ ನ್ಯಾಯಾಲಯ ಪೂರ್ವ ಠಾಣೆ ಪೊಲೀಸರಿಗೆ ಸೂಚಿಸಿತ್ತು.

‘ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಚಿವ ಅಶ್ವತ್ಥನಾರಾಯಣ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು ನೀತಿ ಸಂಹಿತೆ ಉಲ್ಲಂಘಿಸಿದ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.