ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಎಫ್ಐಆರ್

ಬೆಂಗಳೂರು: ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಆರಂಭವಾಗಿದೆ.
ತಮ್ಮ ಮನೆಯಲ್ಲೇ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಂತೋಷ್ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಇದುವರೆಗೂ ಪ್ರಜ್ಞೆ ಬಂದಿಲ್ಲ. ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ್ದ ಪೊಲೀಸರು, ವೈದ್ಯರಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆಗೆ ಯತ್ನ
‘ಪ್ರಕರಣ ಸಂಬಂಧ ಸಂತೋಷ್ ಅವರ ಪತ್ನಿ ಜಾಹ್ನವಿ ಹಾಗೂ ಇತರರ ಹೇಳಿಕೆ ಪಡೆಯಲಾಗಿದೆ. ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ಗೊತ್ತಾಗಿಲ್ಲ. ಸಂತೋಷ್ ಅವರಿಗೆ ಪ್ರಜ್ಞೆ ಬಂದ ನಂತರ ವೈದ್ಯರ ಸಲಹೆ ಪಡೆದು ಹೇಳಿಕೆ ಪಡೆಯಲಾಗುವುದು. ಆಗಲೇ ನಿಖರ ಕಾರಣ ತಿಳಿಯಲಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ಕೌಟುಂಬಿಕ ಹಾಗೂ ರಾಜಕೀಯ ಕಾರಣದಿಂದ ಆತ್ಮಹತ್ಯೆಗೆ ಯತ್ನಿಸಿರುವ ಅನುಮಾನವಿದೆ. ಎರಡೂ ಆಯಾಮದಲ್ಲೂ ತನಿಖೆ ಮುಂದುವರಿದಿದೆ. ಸದ್ಯಕ್ಕೆ ಯಾವುದೇ ನಿಖರ ಪುರಾವೆಗಳು ಸಿಕ್ಕಿಲ್ಲ’ ಎಂದೂ ಹೇಳಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.