ಗುರುವಾರ , ನವೆಂಬರ್ 26, 2020
19 °C
ನಾಲ್ವರಿಗೆ ಗಾಯ: ಇಬ್ಬರನ್ನು ಹಿಡಿದ ಸ್ಥಳೀಯರು

ಕ್ಷುಲ್ಲಕ ಕಾರಣಕ್ಕೆ ಗುಂಡಿನ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ನಗರದ ಫಳ್ನೀರ್‌ನ ಹೋಟೆಲ್‌ನಲ್ಲಿ ಶುಕ್ರವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಹೊಡೆದಾಟ
ದಲ್ಲಿ, ಗುಂಡಿನ ದಾಳಿ ನಡೆದಿದೆ. ಗುಂಡೇಟಿನಿಂದ ಫಳ್ನೀರ್‌ನ ಶಾಹಿಲ್ ಮತ್ತು ಸುರತ್ಕಲ್‌ನ ಸೈಫ್‌ ತೀವ್ರ ಗಾಯ
ಗೊಂಡಿದ್ದಾರೆ. ಜಗಳದಲ್ಲಿ ಸಿದ್ದೀಕ್ ಮತ್ತು ಹಾಝಿಲ್ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಸಂಜೆ 5.30ರ ವೇಳೆ ತಿಂಡಿಯ ವಿಚಾರದಲ್ಲಿ ಜಗಳ ಆರಂಭವಾಗಿದೆ. ಹೋಟೆಲ್‌ಗೆ ಬಂದಿದ್ದ ಯುವಕರ ತಂಡ,
ಸಮೋಸ ಕೇಳಿದೆ. ಈ ಮಧ್ಯೆ ತಂಡದ ಇಬ್ಬರು ಹೋಟೆಲ್‌ ಸಿಬ್ಬಂದಿ ಜೊತೆ ಜಗಳ ತೆಗೆದಿದ್ದಾರೆ. ಆಗ ಹೊಡೆದಾಟ ಆರಂಭವಾಗಿದ್ದು, ಪೀಠೋಪಕರಣ ಧ್ವಂಸಗೊಳಿಸಿ ಪರಾರಿಗೆ ಯತ್ನಿಸಿದ್ದಾರೆ.

ಅವರನ್ನು ಹಿಡಿಯಲು ಯತ್ನಿಸಿದ ಸಿಬ್ಬಂದಿ ಮೇಲೆ ಎರಡು ಸುತ್ತು ಗುಂಡು ಹಾರಿಸಲಾಗಿದೆ. ಗುಂಡೇಟಿನಿಂದ ಇಬ್ಬರು ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಸ್ಥಳೀಯರು ಸೇರಿ ಇಬ್ಬರನ್ನು ಹಿಡಿದಿದ್ದು, ಇನ್ನಿಬ್ಬರು ಆಟೋರಿಕ್ಷಾದಲ್ಲಿ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಏರ್ ಪಿಸ್ತೂಲ್‌ನಿಂದ ಗುಂಡು ಹೊಡೆದಿರುವ ಸಾಧ್ಯತೆ ಇದ್ದು, ತನಿಖೆ ನಡೆಸಲಾಗುತ್ತಿದೆ. ದುಷ್ಕರ್ಮಿಗಳ ಬಳಿ ಪಿಸ್ತೂಲ್ ಹೇಗೆ ಬಂತು ಎನ್ನುವ ವಿಷಯದಲ್ಲೂ ತನಿಖೆ ಮುಂದುವರಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು