ಬೆಂಗಳೂರು: ಬಾಂಗ್ಲಾ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರಪ್ರಕರಣದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಬುಧವಾರ ಬೆಳಿಗ್ಗೆ ಬಂಧಿಸಿದ್ದಾರೆ.

ಸೊಬೂಜ್ (30) ಬಂಧಿತ ಆರೋಪಿ. ‘ಈತನೂ ಯುವತಿ ಮೇಲೆ ದೌರ್ಜನ್ಯ ನಡೆಸಿದ್ದ. ಘಟನೆ ಬೆಳಕಿಗೆ ಬಂದ ನಂತರ ತಲೆಮರೆಸಿಕೊಂಡಿದ್ದ’ ಎಂದು ಪೊಲೀಸರು ತಿಳಿಸಿದರು.

‘ಆವಲಹಳ್ಳಿ ಸಮೀಪದ ರಾಂಪುರ ಕೆರೆಯ ಬಳಿ ಕಸ ಆಯುವವರ ಶೆಡ್ನಲ್ಲಿ ಸೊಬೂಜ್ ತಂಗಿರುವ ಮಾಹಿತಿಯನ್ನು ಪೊಲೀಸರುಕಲೆಹಾಕಿದ್ದರು. ಆರೋಪಿಯನ್ನು ಬಂಧಿಸಿ ಜೀಪ್ನಲ್ಲಿ ಕರೆತರುತ್ತಿದ್ದಾಗ, ಮೂತ್ರ ವಿಸರ್ಜನೆ ಮಾಡಬೇಕೆಂದು ಕೇಳಿಕೊಂಡಿದ್ದ.ಪೊಲೀಸರು ಅದನ್ನು ನಂಬಿ ಆರೋಪಿಯನ್ನು ಜೀಪಿನಿಂದ ಕೆಳಗೆ ಇಳಿಸಿದ್ದರು. ಈ ವೇಳೆ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದ’.

‘ಶರಣಾಗುವಂತೆ ಪೊಲೀಸರು ತಿಳಿಸಿದರೂ ಅದಕ್ಕೆ ಒಪ್ಪದ ಆರೋಪಿ, ಪೊಲೀಸ್ ಸಿಬ್ಬಂದಿ ಮೇಲೆಚಾಕುವಿನಿಂದ ಹಲ್ಲೆ ನಡೆಸಿದ. ಈ ವೇಳೆ ಪಿಎಸ್ಐ ಶಿವರಾಜ್ ಹಾಗೂ ಹೆಡ್ ಕಾನ್ಸ್ಟೆಬಲ್ ದೇವೇಂದ್ರ ನಾಯಕ್ ಗಾಯಗೊಂಡರು. ಶಿವರಾಜ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದರು’ ಎಂದು ಮಾಹಿತಿ ನೀಡಿದರು.

ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ದಂಪತಿ ಸೇರಿ ನಾಲ್ವರು ಚೆನ್ನೈನಲ್ಲಿ ಪೊಲೀಸರಿಗೆ ಇತ್ತೀಚೆಗಷ್ಟೇ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಈವರೆಗೆ 11 ಮಂದಿಯನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.