ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿಗೆ ಬಂತು ಮೊದಲ ಎಲೆಕ್ಟ್ರಿಕ್ ಬಸ್

Last Updated 30 ಸೆಪ್ಟೆಂಬರ್ 2021, 9:36 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಕ್ಕೆ ಮೊದಲ ಎಲೆಕ್ಟ್ರಿಕ್ ಬಸ್ ಬೆಂಗಳೂರಿಗೆ ಬಂದಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ 90 ಮಿನಿ ಬಸ್‌ಗಳನ್ನು ರಸ್ತೆಗೆ ಇಳಿಸಲು ಬಿಎಂಟಿಸಿ ಮುಂದಾಗಿದೆ.

ಜೆಬಿಎಂ ಕಂಪನಿಯಿಂದ ಗುತ್ತಿಗೆ(ಜಿಸಿಸಿ) ಆಧಾರದಲ್ಲಿ ಬಸ್ ಪಡೆದುಕೊಳ್ಳಲಾಗುತ್ತಿದ್ದು, ಎನ್ ಟಿಪಿಸಿ ಸಹಯೋಗದಲ್ಲಿ ಸೇವೆ ಒದಗಿಸಲು ಒಪ್ಪಂದ ‌ಮಾಡಿಕೊಳ್ಳಲಾಗಿದೆ.

ಬೆಂಗಳೂರಿಗೆ ಬಂದಮೊದಲ ಬಸ್ ಪರೀಕ್ಷಾರ್ಥ ಸಂಚಾರವನ್ನು ಬಿಎಂಟಿಸಿಯಕೆಂಗೇರಿ ಘಟಕದೊಳಗೇ‌ ನಡೆಸಲಾಯಿತು. ಸಾರಿಗೆ ಸಚಿವ ಶ್ರೀರಾಮುಲು, ಬಿಎಂಟಿಸಿ ಅಧ್ಯಕ್ಷ ‌ನಂದೀಶ್ ರೆಡ್ಡಿ,ಉಪಾಧ್ಯಕ್ಷ ಎಂ.ಆರ್. ವೆಂಕಟೇಶ್, ಸಾರಿಗೆ ಇಲಾಖೆ‌ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.‌ಅನ್ಬುಕುಮಾರ್ ಬಸ್ ನಲ್ಲಿ ‌ಕುಳಿತು ಒಂದು ಸುತ್ತು ಸಂಚರಿಸಿದರು.

34 ಆಸನಗಳ ಈ ಬಸ್ ನಲ್ಲಿ ಎರಡು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಆರು ಬ್ಯಾಟರಿಗಳ ಸಹಾಯದಲ್ಲಿ ಬಸ್ ಸಂಚರಿಸಲಿದೆ. ಒಮ್ಮೆ ಚಾರ್ಜ್ ಮಾಡಿದರೆ 120 ಕಿಲೋ ಮೀಟರ್ ಸಂಚರಿಸುವ ಸಾಮರ್ಥ್ಯ ಹೊಂದಿದೆ.

ನ.1ಕ್ಕೆ 10 ಬಸ್‌ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರ್ವಜನಿಕ ಸೇವೆಗೆ ಸಮರ್ಪಿಸುವರು.

ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲಾ 90 ಬಸ್‌ಗಳು ರಸ್ತೆಗೆ ಇಳಿಯಲಿವೆ. ಎರಡನೇ ಹಂತದಲ್ಲಿ 300 ಬಸ್‌ಗಳು ಇನ್ನು ಆರು ತಿಂಗಳಲ್ಲಿ ರಸ್ತೆಗೆ ಇಳಿಯಲಿವೆ ಎಂದು ಶ್ರೀರಾಮುಲು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT