ಶನಿವಾರ, ಮೇ 8, 2021
24 °C

ಚಾಲಕನ ಕೊಲೆ: ಐವರು ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಕವಟಗಿ ಪುನರ್ವಸತಿ ಕೇಂದ್ರದ ಬಳಿ ಶುಕ್ರವಾರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ ತಡೆದು ಚಾಲಕ ನಬಿ ರಸೂಲ್ ಆವಟಿ (59) ಅವರನ್ನು ಕಲ್ಲು ಹೊಡೆದು ಸಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಸಾವಳಗಿ ಠಾಣೆ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. 

ವಾಯವ್ಯ ಸಾರಿಗೆ ಸಂಸ್ಥೆ ಸಿಬ್ಬಂದಿಗಳಾದ ಮಲ್ಲಪ್ಪ ತಳವಾರ, ಚೇತನ ಕರ್ವೆ, ಸದಾಶಿವ ಕಂಕಣವಾಡಿ, ಲೋಹಿತ್ ದಾಸರ ಹಾಗೂ ಅರುಣ್ ಅರಕೇರಿ ಬಂಧಿತರು ಎಂದು ತಿಳಿದುಬಂದಿದೆ.

ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಗಳು ಬಸ್‌ಗಳು ಸಂಚಾರ ಮಾಡಬಾರದು ಹಾಗೂ ಸಾರ್ವಜನಿಕವಾಗಿ ಆತಂಕದ ವಾತಾವರಣ ಸೃಷ್ಟಿಯಾಗಬೇಕು ಎಂಬ ಕಾರಣಕ್ಕೆ ಆರೋಪಿಗಳು ನಬಿ ಅವರ ಮೇಲೆ ಕಲ್ಲು ತೂರಾಟ ಮಾಡಿ ದಾಳಿ ನಡೆಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿರುವ ಪೊಲೀಸರು, ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.