ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಅವರನ್ನು ರೈಲ್ವೆ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರನ್ನು ಲೋಕಾಯುಕ್ತ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಲೋಕಾಯುಕ್ತ ಎಡಿಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ಎಸ್. ಮೂರ್ತಿ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ಹೌಸಿಂಗ್ ಕಾರ್ಪೊರೇಶನ್ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಐಪಿಎಸ್ ಅಧಿಕಾರಿ ಕೆ. ರಾಮಚಂದ್ರರಾವ್ ಅವರನ್ನು ಬಿಎಂಟಿಎಫ್ ಎಡಿಜಿಪಿಯಾಗಿ ಮತ್ತು ಅರುಣ್ ಜೇಜಿ ಚಕ್ರವರ್ತಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗ ಮಾಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.