ಬುಧವಾರ, ಏಪ್ರಿಲ್ 21, 2021
25 °C

ಐವರು ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ಬೆಂಗಳೂರು: ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್‌ ರಾವ್‌ ಸೇರಿದಂತೆ ಐವರು ಹಿರಿಯ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ.

ಭಾಸ್ಕರ್‌ ರಾವ್‌ ಅವರನ್ನು ರೈಲ್ವೆ ಎಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಿದ್ದು, ಆ ಹುದ್ದೆಯಲ್ಲಿದ್ದ ಅರುಣ್‌ ಜೇಜಿ ಚಕ್ರವರ್ತಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯನ್ನಾಗಿ ನೇಮಿಸಲಾಗಿದೆ.

ಪ್ರಶಾಂತ್ ಕುಮಾರ್‌ ಠಾಕೂರ್‌ ಅವರನ್ನು ಲೋಕಾಯುಕ್ತ ಎಡಿಜಿಪಿ, ಡಾ.ಅಲಿಕಾನಾ ಎಸ್‌. ಮೂರ್ತಿ ಅವರನ್ನು ಪೊಲೀಸ್‌ ಗೃಹ ನಿರ್ಮಾಣ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಮತ್ತು ಕೆ. ರಾಮಚಂದ್ರ ರಾವ್‌ ಅವರನ್ನು ಬೆಂಗಳೂರು ಮಹಾನಗರ ಕಾರ್ಯಪಡೆ ಎಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು