ಮೈಸೂರು: ‘ಅಮೃತ ಕಾಲಕ್ಕೆ 2047 ಆಗಬೇಕಿಲ್ಲ. ನನಗೆ ಅಧಿಕಾರ ಕೊಟ್ಟರೆ ಐದು ವರ್ಷ ಸಾಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಪ್ರತಿಪಾದಿಸಿದರು.
ಸುದ್ದಿಗೋಷ್ಠಿಯಲ್ಲಿ ಅವರು, ‘ಎಚ್.ಡಿ.ದೇವೇಗೌಡರ ಕನಸಾದ ‘ಪಂಚರತ್ನ’ ಕಾರ್ಯಕ್ರಮಗಳ ಜಾರಿಗೆ ₹ 2.5 ಲಕ್ಷ ಕೋಟಿ ಸಂಗ್ರಹಿಸಲಾಗುವುದು. ಎಲ್ಲ ಸಮುದಾಯಗಳ ಅಭಿವೃದ್ಧಿಯಾಗಿ ಸುವರ್ಣ ರಾಜ್ಯ ಸ್ಥಾಪನೆಯಾಗಲಿದೆ’ ಎಂದರು.
‘ಪಂಚರತ್ನ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಮಾ.26ರಂದು ನಗರದ ಚಾಮುಂಡಿಬೆಟ್ಟದ ತಪ್ಪಲಿನ ಉತ್ತನಹಳ್ಳಿ ರಿಂಗ್ ರಸ್ತೆ ಮೈದಾನದಲ್ಲಿ ಸಮಾರೋಪ ನಡೆಯಲಿದೆ. 10 ಲಕ್ಷ ಜನ ಸೇರಲಿದ್ದಾರೆ’ ಎಂದರು.
‘ಏಪ್ರಿಲ್ ಮೊದಲ ವಾರ ಚುನಾವಣೆ ಘೋಷಣೆ ಆಗುವ ಸಂಭವವಿದ್ದು, ಸಮಾರೋಪದ ಮೂಲಕವೇ ಪ್ರಚಾರ ಆರಂಭಿಸುತ್ತಿದ್ದೇವೆ. ದೇವೇಗೌಡರು ಶ್ರೀರಾಂಪುರದಿಂದ 3 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ’ ಎಂದರು.
‘ಜನರಿಗೆ ಕಾಂಗ್ರೆಸ್ ನಕಲಿ ಗ್ಯಾರಂಟಿ ಕಾರ್ಡ್ ಕೊಡುತ್ತಿದೆ. ರಾಜ್ಯದ ಈಗಿನ ಆರ್ಥಿಕ ಪರಿಸ್ಥಿತಿಯಲ್ಲಿ ಗ್ಯಾರಂಟಿ ಕೊಡುವುದು ಕಷ್ಟವೆಂದು ಸಿದ್ದರಾಮಯ್ಯ ಅವರಿಗೂ ಗೊತ್ತಿದೆ‘ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.