ಸೋಮವಾರ, ಆಗಸ್ಟ್ 15, 2022
23 °C

ಬೆಳೆ ಹಾನಿ: ಕೇಂದ್ರ ತಂಡದಿಂದ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಕೆ.ವಿ. ಪ್ರತಾಪ್ ನೇತೃತ್ವದ ಅಧ್ಯಯನ ತಂಡವು ಮಂಗಳವಾರ (ಸೆ.8) ಭೇಟಿ ನೀಡಿ ಪರಿಶೀಲಿಸಲಿದೆ.

ಜಿಲ್ಲೆಯ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಬೆಳಿಗ್ಗೆ 9.15ಕ್ಕೆ ಇಲ್ಲಿನ ಪ್ರವಾಸಿಮಂದಿರದಲ್ಲಿ ಕೇಂದ್ರ ತಂಡಕ್ಕೆ ಮಾಹಿತಿ ನೀಡಲಿದ್ದಾರೆ.

‘ತಂಡವು ಹುಕ್ಕೇರಿ ತಾಲ್ಲೂಕಿನ ಬಡಕುಂದ್ರಿ, ಯರನಾಳ, ಹೊಸೂರ ಹಾಗೂ ಇಂಗಳಿ ಗ್ರಾಮದ ವ್ಯಾಪ್ತಿಯಲ್ಲಿ ಬೆಳೆ ಹಾನಿ ಪರಿಶೀಲಿಸಲಿದೆ. ಅಲ್ಲಿಂದ ಗೋಕಾಕ ತಾಲ್ಲೂಕಿನ ಮಸಗುಪ್ಪಿ, ತಿಗಡಿ ಗ್ರಾಮದ ವ್ಯಾಪ್ತಿಯಲ್ಲಿ ಬೆಳೆಹಾನಿ ಹಾಗೂ ಲೋಳಸೂರ ಸೇತುವೆ ವೀಕ್ಷಿಸಲಿದೆ. ನಂತರ ಸವದತ್ತಿ ತಾಲ್ಲೂಕಿಗೆ ತೆರಳಲಿದೆ. ಅಲ್ಲಿ ಬೆಳೆ ಹಾನಿ ಪರಿಶೀಲಿಸಿದ ಬಳಿಕ ಇನಾಂಹೊಂಗಲ ಮಾರ್ಗವಾಗಿ ಧಾರವಾಡ ಜಿಲ್ಲೆಗೆ ತೆರಳಲಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.