ಭಾನುವಾರ, ನವೆಂಬರ್ 29, 2020
22 °C

ಕೇಂದ್ರದಿಂದ ಇನ್ನಷ್ಟು ನೆರೆ ಪರಿಹಾರಕ್ಕೆ ಯತ್ನ: ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

ಬೆಂಗಳೂರು: ‘ಪ್ರವಾಹದಿಂದ ತತ್ತರಿಸಿರುವ ಕರ್ನಾಟಕಕ್ಕೆ ಮುಂದಿನ ದಿನಗಳಲ್ಲಿ ಕೇಂದ್ರದಿಂದ ಇನ್ನಷ್ಟು ಪರಿಹಾರ ಸಿಗುವ ವಿಶ್ವಾಸವಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್‌) ಅಡಿ ಶುಕ್ರವಾರ ₹ 577 ಕೋಟಿ ಬಿಡುಗಡೆ ಮಾಡಿದೆ. ಇದು ಮೊದಲು ಕಂತಿನ ಹಣ. ಕೇಂದ್ರದಿಂದ ಇನ್ನೂ ಹೆಚ್ಚಿನ ನೆರೆ ಪರಿಹಾರಕ್ಕೆ ಪ್ರಯತ್ನಿಸುತ್ತೇವೆ’ ಎಂದರು.

ಈ ವರ್ಷ ರಾಜ್ಯದ 13 ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ 24 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ನಷ್ಟ ಉಂಟಾಗಿದ್ದು, ಪರಿಹಾರ ನೀಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಈಗಾಗಲೇ ಮನವಿ ಸಲ್ಲಿಸಿದೆ. ಆದರೆ, ಕೇಂದ್ರ ಸರ್ಕಾರ ಕಾಟಾಚಾರಕ್ಕೆ ಹಣ ಬಿಡುಗಡೆ ಮಾಡಿದ್ದು, ಈ ಮೊತ್ತ ಕಡಿಮೆ ಆಗಿದೆ ಎನ್ನುವ ಆರೋಪ ವ್ಯಕ್ತವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು