ಬುಧವಾರ, ಅಕ್ಟೋಬರ್ 28, 2020
17 °C

ಕಪಿಲಾ ನದಿಯಲ್ಲಿ ಪ್ರವಾಹದ ಮುನ್ನಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಕಬಿನಿ ಜಲಾಶಯದ ಒಳ ಹರಿವಿನಲ್ಲಿ ಏರಿಕೆಯಾಗಿದ್ದು, ನದಿಗೆ 35 ಸಾವಿರ ಕ್ಯುಸೆಕ್ ನಷ್ಟು ನೀರು ಬಿಡಲಾಗುತ್ತಿದೆ. ಕಪಿಲಾ ನದಿಯಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದ್ದು, ತಗ್ಗು ಪ್ರದೇಶದಲ್ಲಿ ಇರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಕೇರಳದ ವೈನಾಡು ಭಾಗದಲ್ಲಿ ಬಿರುಸಿನ ಮಳೆ ಸುರಿಯುತ್ತಿರುವುದರಿಂದ ಜಲಾಶಯದ ಒಳ ಹರಿವಿನ ಪ್ರಮಾಣ 35 ಸಾವಿರ ಕ್ಯುಸೆಕ್ ತಲುಪಿದೆ. 

ಈಗಾಗಲೇ ಸಮೀಪದ ಬಿದರಹಳ್ಳಿ‌ ಸೇತುವೆ ಜಲಾವೃತವಾಗಿದೆ. ನದಿ ಪಾತ್ರದ ಗದ್ದೆಗಳಿಗೆ ನೀರು ನುಗ್ಗುವ ಭೀತಿ ಸೃಷ್ಟಿಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು