ಭಾನುವಾರ, ಸೆಪ್ಟೆಂಬರ್ 26, 2021
21 °C

ನೆಹರು ಓಲೇಕಾರ ಅವರಿಗೆ ಸಚಿವ ಸ್ಥಾನಕ್ಕೆ ಒತ್ತಾಯ; ನೀರಿನ ಟ್ಯಾಂಕ್ ಏರಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಶಾಸಕ ನೆಹರೂ ಓಲೇಕಾರ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಟ್ಯಾಂಕ್ ಮೇಲಿಂದ ಬಿದ್ದು ಸಾಯುತ್ತೇವೆ ಎಂದು ಇಬ್ಬರು ಬೆಂಬಲಿಗರು ಮಂಗಳವಾರ ಪ್ರತಿಭಟನೆ ನಡೆಸಿದರು. 

ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿರುವ ಸುಮಾರು 100 ಅಡಿ ಎತ್ತರದ ನೀರಿನ ಟ್ಯಾಂಕ್ ಮೇಲೆ ನಿಂತು ಪ್ರತಿಭಟನೆ ನಡೆಸಿದ ಕಾರಣ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು.

ಹಾವೇರಿ ಜಿಲ್ಲೆ ಹತ್ತಿಮತ್ತೂರು ಗ್ರಾಮದ ಚಂದ್ರಶೇಖರ್ ಮತ್ತು ಹಾಗೂ ಭೀಮನಗೌಡ ಪಾಟೀಲ ಪ್ರತಿಭಟನೆ ನಡೆಸಿದವರು.

ಸ್ಥಳಕ್ಕೆ ತಹಶೀಲ್ದಾರ್ ಗಿರೀಶ ಸ್ವಾದಿ, ಪೊಲೀಸರು ಮತ್ತು ನಗರಸಭೆ ಸದಸ್ಯ ಶಿವರಾಜ ಅವರು ಬಂದು ಪ್ರತಿಭಟನಾಕಾರರ ಮನವೊಲಿಸಿದರು. 

ನಂತರ ಪ್ರತಿಭಟನಾಕಾರರು ಟ್ಯಾಂಕ್ ಇಳಿದು ಬರುವ ಮೂಲಕ ಪ್ರಕರಣ ಸುಖಾಂತ್ಯಗೊಂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು