ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಹೆಚ್ಚಳ | ಪಡಿತರ ಪಡೆಯಲು ಬಯೋಮೆಟ್ರಿಕ್‌ ಕಡ್ಡಾಯ ಅಲ್ಲ: ಆಹಾರ ಇಲಾಖೆ

Last Updated 12 ಮೇ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ‘ಮೇ ತಿಂಗಳ ಆಹಾರ ಧಾನ್ಯ ಪಡೆಯಲು ಪಡಿತರ ಚೀಟಿದಾರರ ಬಯೋ ಮೆಟ್ರಿಕ್‌ (ಬೆರಳಚ್ಚು) ಕಡ್ಡಾಯ ಅಲ್ಲ’ ಎಂದು ಆಹಾರ ಇಲಾಖೆ ತಿಳಿಸಿದೆ.

ಕೋವಿಡ್‌ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಕಾರಣ ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿದಾರರ ಆರೋಗ್ಯ ಹಿತರಕ್ಷಣೆ ದೃಷ್ಟಿಯಿಂದ ಬಯೋಮೆಟ್ರಿಕ್‌ ಪಡೆಯದೆ ಆಹಾರಧಾನ್ಯ ವಿತರಿಸಲು ನ್ಯಾಯ ಬೆಲೆ ಅಂಗಡಿದಾರರಿಗೆ ಇಲಾಖೆ ಸೂಚನೆ ನೀಡಿದೆ.

‘ಪಡಿತರ ಚೀಟಿದಾರರ ಆಧಾರ್‌ಗೆ ಜೋಡಿಸಿಕೊಂಡಿರುವ ಮೊಬೈಲ್‌ಗೆ ಬಂದ ಒಟಿಪಿ ಪಡೆದು ಪಡಿತರ ವಿತರಿಸಬಹುದು. ವಯೋವೃದ್ಧರು, ಅನಾರೋಗ್ಯಪೀಡಿತರು, ಅಂಗವಿಕಲರಿಗೆ ವಿನಾಯಿತಿ ಸೌಲಭ್ಯದಡಿ ಪಡಿತರ ವಿತರಿಸಲಾಗುವುದು. ಪಡಿತರ ಚೀಟಿದಾರರ ಪರಿಶೀಲನಾ ಪಟ್ಟಿ ಮೂಲಕವೂ ಧಾನ್ಯ ವಿತರಿಸಲಾಗುವುದು’ ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT