ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕಿಗೊಬ್ಬ ವಿಧಿವಿಜ್ಞಾನ ಅಧಿಕಾರಿ: ಆರಗ ಜ್ಞಾನೇಂದ್ರ

Last Updated 23 ಫೆಬ್ರುವರಿ 2023, 22:31 IST
ಅಕ್ಷರ ಗಾತ್ರ

ಬೆಂಗಳೂರು: ವಿಧಿ ವಿಜ್ಞಾನ ತಜ್ಞರಾಗಿರುವ 206 ‘ಸೀನ್‌ ಆಫ್‌ ಕ್ರೈಮ್‌ ಅಧಿಕಾರಿ’ಗಳನ್ನು ನೇಮಕ ಮಾಡಿಕೊಂಡಿದ್ದು, ಪ್ರತಿ ತಾಲ್ಲೂಕಿಗೆ ಒಬ್ಬರನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ವಿಧಾನಸಭೆಯಲ್ಲಿ ಗುರುವಾರ ಕಾಂಗ್ರೆಸ್‌ನ ಸಿ. ಪುಟ್ಟರಂಗ ಶೆಟ್ಟಿ ಅವರ ಪರವಾಗಿ ಆರ್‌. ನರೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪಿಸುವ ಯೋಜನೆ ಇದೆ. ಅಪರಾಧ ಕೃತ್ಯ ನಡೆದ ಸ್ಥಳದಲ್ಲಿ ವೈಜ್ಞಾನಿಕವಾಗಿ ಸಾಕ್ಷ್ಯ ಸಂಗ್ರಹಿಸಲು ವಿಧಿ ವಿಜ್ಞಾನ ಅಧಿಕಾರಿಗಳನ್ನು ನೇಮಿಸಲಾಗುವುದು’ ಎಂದರು. ಸ್ವಾತಂತ್ರ್ಯಾ ನಂತರದಲ್ಲಿ ಹಿಂದೆಂದೂ ಆಗದಷ್ಟು ಠಾಣೆಗಳ ಕಟ್ಟಡ ನಿರ್ಮಾಣ, ಪೊಲೀಸ್‌ ವಸತಿ ಗೃಹಗಳ ನಿರ್ಮಾಣ ಈ ಅವಧಿಯಲ್ಲಿ ಆಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT