ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವನ್ಯಜೀವಿ ರಕ್ಷಣೆಯಲ್ಲಿ ರಾಜ್ಯ ಪ್ರಥಮ’

ಅಧಿಕಾರಿಗಳು ಮತ್ತು ಸಿಬ್ಬಂದಿಗೆ ‘ಮುಖ್ಯಮಂತ್ರಿಗಳ ಪದಕ’ ಪ್ರದಾನ
Last Updated 23 ನವೆಂಬರ್ 2020, 20:50 IST
ಅಕ್ಷರ ಗಾತ್ರ

ಬೆಂಗಳೂರು: ‘ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ದೇಶದಲ್ಲಿಯೇ ಕರ್ನಾಟಕ ಮುಂಚೂಣಿಯಲ್ಲಿದೆ. ವಿಶ್ವದ ಜೀವವೈವಿಧ್ಯ ತಾಣಗಳು ಎಂದು ಹೆಸರಾಗಿರುವ ಪಶ್ಚಿಮಘಟ್ಟಗಳ ಬಹುಭಾಗ ನಮ್ಮ ರಾಜ್ಯದಲ್ಲಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ರಾಜ್ಯದ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ 2017, 2018 ಮತ್ತು 2019ನೇ ಸಾಲಿನಲ್ಲಿ ಗಣನೀಯ ಸಾಧನೆ ಮಾಡಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ‘ಮುಖ್ಯಮಂತ್ರಿಗಳ ಪದಕ’ ಪ್ರದಾನ ಮಾಡಿ ಮಾತನಾಡಿದ ಅವರು, ‘ಅರಣ್ಯಗಳು ಜೀವ ಜಲದ ಆಗರ. ನೈಸರ್ಗಿಕ ಸಂಪತ್ತನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಸಂವಿಧಾನಿಕ ಜವಾಬ್ದಾರಿ ಮತ್ತು ಕರ್ತವ್ಯ. ಅರಣ್ಯ ಮತ್ತು ವನ್ಯಜೀವಿ ಸಂಪನ್ಮೂಲವನ್ನು ರಕ್ಷಿಸಲು ರಾಜ್ಯದ ಶೇ 22ರಷ್ಟು ಭಾಗ ಮೀಸಲಿರಿಸಲಾಗಿದೆ’ ಎಂದರು.

‘ಆನೆಗಳ ಸಂಖ್ಯೆಯಲ್ಲಿ ರಾಜ್ಯ ಅಗ್ರ ಸ್ಥಾನದಲ್ಲಿದೆ. ರಾಜ್ಯದಲ್ಲಿ 524 ಹುಲಿಗಳಿದ್ದು, ದೇಶದಲ್ಲಿ ಎರಡನೇ ಸ್ಥಾನ ಹೊಂದಿದೆ. ಹೆಚ್ಚುತ್ತಿರುವ ಜನಸಂಖ್ಯೆ, ಜನರ ಜೀವನ ಶೈಲಿ, ನಗರೀಕರಣ ಇತ್ಯಾದಿಗಳಿಂದ ಅರಣ್ಯ ಮತ್ತು ವನ್ಯಜೀವಿಗಳ ಅಸ್ತಿತ್ವಕ್ಕೆ ಹೆಚ್ಚು ಒತ್ತಡ ಬೀಳುತ್ತಿದೆ. ಇಂಥ ಸನ್ನಿವೇಶದಲ್ಲಿ ಎಲ್ಲ ಒತ್ತಡಗಳನ್ನು ಮೀರಿ ಅರಣ್ಯ ಇಲಾಖೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ’ ಎಂದರು.

ಅರಣ್ಯ ಸಚಿವ ಆನಂದ್ ಸಿಂಗ್ ಮಾತನಾಡಿ, ‘ಬೇರೆ ಬೇರೆ ರಾಜ್ಯಗಳು ನಮ್ಮ ಅರಣ್ಯ ಇಲಾಖೆಯನ್ನು ಮಾದರಿಯಾಗಿ ಇಟ್ಟುಕೊಂಡು ಕಾರ್ಯನಿರ್ವಹಿಸುತ್ತಿವೆ. ಅರಣ್ಯ ಉಳಿಸಲು ಅರಣ್ಯ ಅಧಿಕಾರಿಗಳು, ಅರಣ್ಯ ರಕ್ಷಕರು ತಮ್ಮ ಜೀವವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ’ ಎಂದರು.

ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಸಂದೀಪ್ ದವೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್ ಹಾಗೂ ಮುಖ್ಯಮಂತ್ರಿಗಳ ಪದಕ ಪಡೆದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT