ಬೆಂಗಳೂರು: ಮಸೀದಿಯ ಚಿತ್ರದ ಮೇಲೆ ಭಗವಾಧ್ವಜ ಹಾರಿಸಿದ ಚಿತ್ರ ಎಡಿಟ್ ಮಾಡಿ ಯುವಕನೊಬ್ಬ ಸ್ಟೇಟಸ್ ಹಾಕಿಕೊಂಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಸಮೀಪದಲ್ಲಿಯೇ ಕಲ್ಲುತೂರಾಟ ನಡೆದಿದೆ. ಸಮೀಪದ ಆಸ್ಪತ್ರೆ ಮೇಲೂ ದಾಳಿಯಾಗಿದೆ.

ಈ ಸಂಬಂಧ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಕಳವಳ ವ್ಯಕ್ತಪಡಿಸಿದ್ದಾರೆ.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಅಶ್ರುವಾಯು ಪ್ರಯೋಗಿಸಿದ್ದಾರೆ. ಘಟನೆಯಲ್ಲಿ ಪೊಲೀಸ್ ವಾಹನಗಳು ಜಖಂಗೊಂಡಿವೆ. ಶನಿವಾರ ತಡರಾತ್ರಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

'ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಟ ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ' ಎಂದು ಮಾಜಿ ಮುಖ್ಯಮಂತ್ರಿಕುಮಾರಸ್ವಾಮಿ ಹೇಳಿದ್ದಾರೆ.

'ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ ಷಡ್ಯಂತ್ರವನ್ನು ಯಾರೂ ಸಹಿಸಬಾರದು. ಸಾಮರಸ್ಯ ಮೂಡಿಸಬೇಕಾದ ಜಾಲತಾಣದಲ್ಲಿ ಒಂದು ಧರ್ಮದ ಯುವಕ ಹಂಚಿಕೊಂಡ ಪ್ರಚೋದನಾತ್ಮಕ ಪೋಸ್ಟ್ ರಾದ್ಧಾಂತಕ್ಕೆ ಕಾರಣ' ಎಂದು ದೂರಿದ್ದಾರೆ.

ಇದನ್ನೂ ಓದಿ:ಪ್ರಚೋದನಕಾರಿ ಪೋಸ್ಟ್: ಹಳೇ ಹುಬ್ಬಳ್ಳಿ ಉದ್ವಿಗ್ನ, ಪೊಲೀಸರ ಮೇಲೆ ಕಲ್ಲು ತೂರಾಟ

ಮತ್ತೊಂದು ಟ್ವೀಟ್‌ನಲ್ಲಿ, 'ಕಿಡಿಗೇಡಿ, ತಿಳಿಗೇಡಿ ಯುವಕನ ಕೃತ್ಯದಿಂದ ಉದ್ರಿಕ್ತಗೊಂಡ ಇನ್ನೊಂದು ಸಮುದಾಯದ ಕೆಲವರು ರಾತ್ರಿಯೆಲ್ಲ ಹುಬ್ಬಳ್ಳಿಯಲ್ಲಿ ಬೀಭತ್ಸ ಸೃಷ್ಟಿಸಿ ದ್ವೇಷದ ಬೆಂಕಿಗೆ ಪೆಟ್ರೋಲ್ ಸುರಿಯದೇ ಸಹನೆ ಮೆರೆಯಬೇಕಿತ್ತು. ಪೊಲೀಸರ ಮೇಲೆ ದಾಳಿ, ಠಾಣೆ ಮತ್ತುಆಸ್ಪತ್ರೆ ಮೇಲೆ ಕಲ್ಲುಗಳನ್ನು ಎಸೆದು ಹಾನಿ ಮಾಡಬಾರದಿತ್ತು' ಎಂದಿದ್ದಾರೆ.

'ಕಿಡಿಗೇಡಿ ಯುವಕನ ಬಂಧನವಾಗಿದೆ. ಕಾನೂನು ಅವನನ್ನು ನೋಡಿಕೊಳ್ಳುತ್ತದೆ. ಇನ್ನೊಂದು ಸಮುದಾಯವು ಕಾನೂನನ್ನು ಕೈಗೆತ್ತಿಕೊಳ್ಳದೆ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಸಹನೆಯಿಂದ ವರ್ತಿಸಬೇಕು. ಕಳೆದ ಕೆಲ ದಿನಗಳಿಂದ ಕರ್ನಾಟಕ ಕೋಮು ದಳ್ಳುರಿಯಲ್ಲಿ ಬೇಯುತ್ತಿದೆ, ಎಲ್ಲರಿಗೂ ನೋವಾಗುತ್ತಿದೆ. ಅದು ಮುಂದುವರಿಯುವುದು ಬೇಡ' ಎಂದು ಮನವಿ ಮಾಡಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ಗಲಭೆ ಪ್ರಕರಣವನ್ನು ಪ್ರಸ್ತಾಪಿಸಿರುವ ಅವರು,'ಅನುಭವದಿಂದ ಪಾಠ ಕಲಿಯುತ್ತಿಲ್ಲ ಎನ್ನುವುದಕ್ಕೆ ಹುಬ್ಬಳ್ಳಿ ಘಟನೆ ಒಂದು ನಿದರ್ಶನ. ಹಿಂದೆ ಬೆಂಗಳೂರಿನಲ್ಲಿ ಕಿಡಿಗೇಡಿ ಯುವಕನೊಬ್ಬ ಒಂದು ಧರ್ಮಗುರುವಿನ ಬಗ್ಗೆ ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದ ಪರಿಣಾಮ, ಶಾಸಕರೊಬ್ಬರ ಮನೆ, ಡಿಜೆ ಹಳ್ಳಿ ಪೊಲೀಸ್ ಠಾಣೆಯೇ ಬೆಂಕಿಗೆ ಆಹುತಿಯಾಗಿತ್ತು' ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ: 40 ಮಂದಿ ವಶಕ್ಕೆ, ಏ. 20ರವರೆಗೆ ನಿಷೇಧಾಜ್ಞೆ

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕುಮಾರಸ್ವಾಮಿ,'ಕುಂದಾಪುರದಿಂದ ಹಿಡಿದು ಹುಬ್ಬಳ್ಳಿವರೆಗೆ ನಡೆದ ಎಲ್ಲ ಘಟನೆಗಳನ್ನು ನೋಡಿದರೆ ಎದ್ದು ಕಾಣುವುದು ರಾಜ್ಯ ಸರ್ಕಾರದಘೋರ ವೈಫಲ್ಯ. ಬಿಗಿಕ್ರಮ ಕೈಗೊಳ್ಳುವ ಬದಲಿಗೆ ಸರ್ಕಾರ ಬೀಡುಬೀಸಾಗಿ ವರ್ತಿಸಿದ್ದೇ ಇಂಥ ಘಟನೆಗಳಿಗೆ ಕಾರಣ. ಹುಬ್ಬಳ್ಳಿ ಘಟನೆಯನ್ನು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಗಂಭೀರವಾಗಿ ಪರಿಗಣಿಸಬೇಕು' ಎಂದು ಒತ್ತಾಯಿಸಿದ್ದಾರೆ.

'ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ. 'ಕೆಲ ಕಿಡಿಗೇಡಿಗಳಿಗೆ ಕಿಚ್ಚೆಂದರೆ ಬಲು ಇಷ್ಟವೆಂಬಂತೆ ಇದೆ. ಅವರಿಗೆ ಸೋಶಿಯಲ್ ಮೀಡಿಯಾ ಹಿಂಸೆ ಹರಡುವ ಟೂಲ್‌ಕಿಟ್ ಆಗಿಬಿಟ್ಟಿದೆ. ಪೊಲೀಸರು, ಮೊದಲು ಅಂಥವರ ಬುಡಕ್ಕೆ ಬೆಂಕಿ ಇಡಬೇಕಿದೆ' ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಡಿಜೆ ಹಳ್ಳಿ ಗಲಭೆ: 247 ಮಂದಿ ವಿರುದ್ಧ ಚಾರ್ಜ್ಶೀಟ್

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಿದಅವರು, 'ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಗೆ ಇಂಥ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕವನ್ನು ಒಡೆದು ಆಳುವ ಮೂಲಕ 'ಬ್ರಿಟೀಷ್ ನೀತಿ'ಯನ್ನೇ ಇವು ಅನುಸರಿಸುತ್ತಿವೆ' ಎಂದಿದ್ದಾರೆ.

'ನಿರುದ್ಯೋಗ, ಬೆಲೆ ಏರಿಕೆ, ಹಣದುಬ್ಬರದಿಂದ ಬರ್ಬರವಾದ ಜನರ ಬದುಕಿನ ಬಗ್ಗೆ 'ಸೋಶಿಯಲ್ ಮೀಡಿಯಾ ಶೂರರ ಮೌನ ಅಪಾಯಕಾರಿ.' ಅಲ್ಲದೆ; ರಾಷ್ಟ್ರೀಯ ಪಕ್ಷಗಳ ಕಾಣದ ಕೈಚಳಕ, ಮೌನ ಕುಮ್ಮಕ್ಕು ವಿನಾಶಕಾರಿ' ಎಂದೂ ಆತಂಕ ವ್ಯಕ್ತಪಡಿಸಿದ್ದಾರೆ.

‘ತಲೆ ಕೆಟ್ಟರೆ ಇಲ್ಲೂ ಭಗವಾಧ್ವಜ ಹಾರಿಸುವೆ, ಜೈ ಶ್ರೀರಾಮ್, ಹಿಂದೂ ಸಾಮ್ರಾಟ್‘ ಎಂದು ಚಿತ್ರದ ಮೇಲೆ ಬರೆಯಲಾಗಿತ್ತು. ಇದು ವಿವಾದಕ್ಕೆ ಕಾರಣವಾಗಿದೆ. ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಅಭಿಷೇಕ್ ಹಿರೇಮಠ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:IPL | ಭಾರತ ತಂಡಕ್ಕೆ ಸೇರ್ಪಡೆಯಾಗಲು ಎಲ್ಲ ಪ್ರಯತ್ನ ಮಾಡುತ್ತಿದ್ದೇನೆ: ಕಾರ್ತಿಕ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.