ಶುಕ್ರವಾರ, ಅಕ್ಟೋಬರ್ 7, 2022
28 °C

ಎಚ್‌.ಡಿ ದೇವೇಗೌಡರನ್ನು ಭೇಟಿಯಾದ ಜಗದೀಶ್‌ ಶೆಟ್ಟರ್‌ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಗುರುವಾರ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರನ್ನು ಭೇಟಿಯಾದರು. 

ಬೆಂಗಳೂರಿನ ಪದ್ಮನಾಭನಗರದ ನಿವಾಸಕ್ಕೆ ತೆರಳಿದ ಶೆಟ್ಟರ್‌ ಅವರು ದೇವೇಗೌಡರ ಆರೋಗ್ಯ ವಿಚಾರಿಸಿದರು. 

ಜಗದೀಶ್‌ ಶೆಟ್ಟರ್‌ ಅವರೊಂದಿಗೆ ಸಚಿವ ಶಂಕರ್ ಪಾಟೀಲ್ ಮುನೇಕೊಪ್ಪ ಅವರೂ ಜೊತೆಗಿದ್ದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸೋಮವಾರ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿದ್ದರು. ಮರುದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರು ಕೂಡ ಪದ್ಮನಾಭನಗರಕ್ಕೆ ತೆರಳಿ ಜೆಡಿಎಸ್‌ ವರಿಷ್ಠರ ಆರೋಗ್ಯ ವಿಚಾರಿಸಿ ಬಂದಿದ್ದರು. 

ಓದಿ... ‘ಪೇಸಿಎಂ’ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ಬಂಧಿಸಿ: ಸಿದ್ದರಾಮಯ್ಯ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು