ದೇವಾಲಯಗಳಲ್ಲಿ ಸೂರ್ಯೋದಯಕ್ಕೆ ಮುನ್ನವೇ ಸುಪ್ರಭಾತ ಕೇಳಿಸುವುದು, ಮಸೀದಿಗಳಲ್ಲಿ ಅಲ್ಲಾಹ್ ಕೂಗುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ. ನಮ್ಮ ಊರಿನಲ್ಲಿ ನಿತ್ಯವೂ ನಾನು ಕೇಳುತ್ತಿದ್ದ ಸದ್ದುಗಳಾಗಿದ್ದವು ಇವು. 1/10
ಹಿಂದುಗಳಾದ ನಾವು ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ ಮುಸ್ಲೀಮರು ಸೇರಿ ಅನ್ಯ ಧರ್ಮದ ಯಾರಿಂದಲೂ ಆಕ್ಷೇಪ ಇಲ್ಲದಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಅಗತ್ಯಬಿದ್ದರೆ, ಶಬ್ದದ ಪ್ರಮಾಣವನ್ನು ವೈಜ್ಞಾನಿಕವಾಗಿ ಚಿಂತಿಸಿ ಕಡಿಮೆ ಮಾಡಲಿ. ಆ ಬಗ್ಗೆ ಮುಸ್ಲಿಂ ಧರ್ಮಗುರುಗಳೂ ಆಲೋಚನೆ ಮಾಡಲಿ. 7/10